



ಬೆಂಗಳೂರು, ಜನವರಿ 10: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, 2024 ರಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ ದಾಖಲೆಯ ಬೆಳವಣಿಗೆ ಕಂಡಿದೆ. 2024 ರಲ್ಲಿ ಬರೋಬ್ಬರಿ 40 ದಶಲಕ್ಷ ಪ್ರಯಾಣಿಕರು ಪ್ರಯಾಣ ಬೆಳೆಸುವ ಮೂಲಕ ಜಾಗತಿಕವಾಗಿ ಅತಿ ದೊಡ್ಡ ವಿಮಾನ ನಿಲ್ದಾಣಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ವಾರ್ಷಿಕ ಸರಕು ಸಾಗಣೆಯು 496,227 ಮೆಟ್ರಿಕ್ ಟನ್ ತಲುಪುವ ಮೂಲಕ ಗರಿಷ್ಠ ದಾಖಲೆ ನಿರ್ಮಾಣವಾಗಿದೆ. ಇದು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಭಾಗಗಳಲ್ಲಿ ತನ್ನ ಕಾರ್ಯಕ್ಷಮತೆಯನ್ನು ಎತ್ತಿ ಹಿಡಿದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.