logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬೆಂಗಳೂರು: ಇಂಡಾಲಜಿ ಡಿಪ್ಲೊಮಾ ಮತ್ತು ಇಂಡಾಲಜಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
25 Jul 2022
post image

ಬೆಂಗಳೂರು:ರೇವಾ ವಿಶ್ವವಿದ್ಯಾಲಯದ ಪ್ರದರ್ಶಕ ಕಲೆ ಮತ್ತು ಭಾರತೀಯ ಅಧ್ಯಯನ ಶಾಸ್ತ್ರ ವಿಭಾಗವು ದಕ್ಷಿಣ ಭಾರತದಲ್ಲಿ ಇತಿಹಾಸವನ್ನು ಸೃಷ್ಟಿಸಿದೆ. ಭಾರತದ 8 ಶಾಸ್ತ್ರೀಯ ನೃತ್ಯ ಪ್ರಕಾರಗಳ ಪೈಕಿ 5 ಶಾಸ್ತ್ರೀಯ ನೃತ್ಯ ಪ್ರಕಾರಗಳಾದ ಭರತನಾಟ್ಯ, ಕೂಚಿಪುಡಿ , ಒಡಿಸ್ಸಿ, ಮೋಹಿನಿಯಾಟ್ಟಂ ಮತ್ತು ಕಥಕ್ ನೃತ್ಯಗಳಲ್ಲಿ ಪದವಿ, ಸ್ನಾತಕೋತ್ತರ, ಪದವಿ, ಡಿಪ್ಲೊಮಾ (online), ಸರ್ಟಿಫಿಕೇಟ್ (online) ಕೋರ್ಸುಗಳಲ್ಲದೆ ಈ ಎಲ್ಲಾ ವಿಭಾಗಗಳಲ್ಲಿ ಸಂಶೋಧನೆ ನಡೆಸುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಮತ್ತು ಆಸಕ್ತರಿಗೆ ಕಲ್ಪಿಸಿದೆ. ಅಷ್ಟೇ ಅಲ್ಲದೆ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಶೈಲಿಗಳಲ್ಲಿ ಹಾಗೂ ನಾಟಕ ವಿಭಾಗದಲ್ಲಿ ಸರ್ಟಿಫಿಕೇಟ್ ಡಿಪ್ಲೊಮಾ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಅವಕಾಶ ಕಲ್ಪಿಸಿದೆ. ಈ ಎಲ್ಲಾ ವಿಭಾಗಗಳಲ್ಲಿ ಪರಿಣತ ಅಧ್ಯಾಪಕರನ್ನು ನೇಮಕ ಮಾಡಲಾಗಿದ್ದು ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವೇದಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ಅಧ್ಯಯನ ವಿಭಾಗದ ಪ್ರಕಟಣೆ ತಿಳಿಸಿದ. ಅಷ್ಟೇ ಅಲ್ಲದೆ ಭಾರತೀಯ ಅಧ್ಯಯನ ಶಾಸ್ತ್ರ ವಿಭಾಗದಲ್ಲಿ ಇಂಡಾಲಜಿ ಡಿಪ್ಲೊಮಾ ಮತ್ತು ಇಂಡಾಲಜಿ ಸ್ನಾತಕೋತ್ತರ ಪದವಿ ಮತು ಡಿಪ್ಲೊಮಾ ಕೋರ್ಸ್ಗಳನ್ನು ಆರಂಭಿಸಲಾಗಿದೆ. ವಿಶ್ವವಿದ್ಯಾನಿಲಯದ ಭಾರತೀಯ ಪ್ರದರ್ಶಕ ಕಲೆಗಳು ಮತ್ತು ಭಾರತೀಯ ಅಧ್ಯಯನ ವಿಭಾಗವು ಅತ್ಯಾಧುನಿಕ ವ್ಯವಸ್ಥೆಯುಳ್ಳ ಸ್ಟುಡಿಯೋಗಳನ್ನು ತರಗತಿಗಳನ್ನು ಹಚ್ಚಹಸಿರಿನ ನಡುವೆ ನೃತ್ಯ ಸಂಗೀತ ಮತ್ತು ನಾಟಕ ಅಭ್ಯಾಸಕ್ಕೆ ಮಂಟಪಗಳನ್ನು ವೇದಿಕೆಗಳನ್ನು ಮತ್ತು ಅತ್ಯಾಧುನಿಕ ವ್ಯವಸ್ಥೆಯುಳ್ಳ ಆಡಿಟೋರಿಯಂಗಳನ್ನು ಹೊಂದಿದೆ. ಇಂಡೋಲಜಿ ವಿಭಾಗದಲ್ಲಿ ಭಾರತೀಯ ಶಾಸ್ತ್ರ ಮತ್ತು ಭಾರತೀಯ ಪಾರಂಪರಿಕ ಕಲೆಗಳು ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ಸಂಗೀತ, ನಾಟಕ, ಸೌಂದರ್ಯಮೀಮಾಂಸೆ, ನ್ಯಾಯಶಾಸ್ತ್ರ, ಸನಾತನ ಸಂಸ್ಥೆಗಳು, ಪ್ರಾಚೀನ ಸಾಮಾಜಿಕ, ರಾಜಕೀಯ ವಿಷಯಗಳ ಕುರಿತ ಅಧ್ಯಯನ ಭಾರತದ ಪ್ರಾಚೀನ ಭಾರತದಲ್ಲಿ ವಿಜ್ಞಾನ,ಗಣಿತ, ಖಗೋಳಶಾಸ್ತ್ರ, ರಸಾಯನಶಾಸ್ತ್ರ ಇತ್ಯಾದಿ ವಿಷಯಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಸಂಶೋಧನೆ ನಡೆಸಲಾಗುವುದು. ಅಷ್ಟೇ ಅಲ್ಲದೆ ತಾಳೆ ಗ್ರಂಥಗಳು, ಪ್ರಾಚೀನ ಹಸ್ತಪ್ರತಿಗಳು ಮತ್ತು ಶಿಲಾಶಾಸನಗಳ ಕುರಿತ ಆಳವಾದ ಅಧ್ಯಯನಕ್ಕೆ ಅವಕಾಶ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- 9886062843, 9886673452

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.