logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ನವೆಂಬರ್ 1ರಿಂದ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ?

ಟ್ರೆಂಡಿಂಗ್
share whatsappshare facebookshare telegram
21 Oct 2026
post image

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಚಾಲನೆ ದೊರೆಯುವ ಸಾಧ್ಯತೆಯಿದೆ. ನವೆಂಬರ್ 2ರಿಂದ ರೈಲಿನ ನಿಯಮಿತ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

ರೈಲ್ವೆ ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ) ವರೆಗೆ ಸಂಚರಿಸಲಿದೆ. ವಾರದಲ್ಲಿ ಆರು ದಿನ ಈ ರೈಲು ಸೇವೆ ಒದಗಿಸುವ ಸಾಧ್ಯತೆಯಿದ್ದು, ಈ ಕುರಿತು ರೈಲ್ವೆ ಮಂಡಳಿಯ ಅಧಿಕೃತ ಅಧಿಸೂಚನೆ ಇನ್ನಷ್ಟೇ ಹೊರಬೀಳಬೇಕಿದೆ.

ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ:

ಪ್ರಸ್ತಾವಿತ ವೇಳಾಪಟ್ಟಿಯ ಪ್ರಕಾರ, ರೈಲು ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ರಾತ್ರಿ 7.50ಕ್ಕೆ ಹೊರಟು, ಮರುದಿನ ಬೆಳಗ್ಗೆ 11.55ಕ್ಕೆ ಮುಂಬೈನ ಸಿಎಸ್‌ಎಂಟಿ ನಿಲ್ದಾಣ ತಲುಪಲಿದೆ. ಈ ಪ್ರಯಾಣಕ್ಕೆ 16 ಗಂಟೆ 5 ನಿಮಿಷ ಬೇಕಾಗಲಿದೆ.

ಮುಂಬೈನಿಂದ ರಾತ್ರಿ 8.10ಕ್ಕೆ ಹೊರಡುವ ರೈಲು ಮರುದಿನ ಬೆಳಗ್ಗೆ 11.55ಕ್ಕೆ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ. ಈ ಪ್ರಯಾಣಕ್ಕೆ 15 ಗಂಟೆ 45 ನಿಮಿಷ ಬೇಕಾಗಲಿದೆ.

ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಸಾಧ್ಯತೆ

ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಗುಂತಕಲ್ ಮಾರ್ಗವಾಗಿ ಸಂಚರಿಸುವ ಸಾಧ್ಯತೆಯಿದೆ. ಅನಂತಪುರ, ಗುಂತಕಲ್, ರಾಯಚೂರು, ಕಲಬುರಗಿ, ಸೊಲ್ಲಾಪುರ, ಪುಣೆ ಮತ್ತು ಕಲ್ಯಾಣ್ ನಿಲ್ದಾಣಗಳಲ್ಲಿ ನಿಲುಗಡೆ ನೀಡುವ ನಿರೀಕ್ಷೆಯಿದೆ.

ಪ್ರಸ್ತುತ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಪ್ರಯಾಣಕ್ಕೆ ಸಾಮಾನ್ಯವಾಗಿ 22ರಿಂದ 24 ಗಂಟೆಗಳವರೆಗೆ ಸಮಯ ಬೇಕಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಆರಂಭವಾದರೆ ಪ್ರಯಾಣದ ಅವಧಿ ಕಡಿಮೆಯಾಗುವ ನಿರೀಕ್ಷೆಯಿದೆ.

ಆದರೆ, ರೈಲಿನ ಉದ್ಘಾಟನೆ ದಿನಾಂಕ, ವೇಳಾಪಟ್ಟಿ, ನಿಲುಗಡೆಗಳು ಮತ್ತು ನಿಯಮಿತ ಸಂಚಾರದ ಕುರಿತು ರೈಲ್ವೆ ಮಂಡಳಿಯ ಅಧಿಕೃತ ಅಧಿಸೂಚನೆ ಹೊರಬಂದ ಬಳಿಕವಷ್ಟೇ ಅಂತಿಮ ಮಾಹಿತಿ ಲಭ್ಯವಾಗಲಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.