



ಬೆಳ್ತಂಗಡಿ : ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರರಾದ ಪಡಂಗಡಿ ಗ್ರಾಮದ 98 ವರ್ಷದ ಹಿರಿಯ ದೇಶಾಭಿಮಾನಿ ಪಡಂಗಡಿ ಭೋಜರಾಜ ಹೆಗ್ಡೆ ಮಂಗಳವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಭೋಜರಾಜ ಹೆಗ್ಡೆ ಅವರು 1923ರ ಫೆಬ್ರವರಿ 13 ರಂದು ಪಡಂಗಡಿಯಲ್ಲಿ ಶಾಂತಿರಾಜ ಶೆಟ್ಟಿ ಮತ್ತು ಲಕ್ಷ್ಮೀಮತಿ ದಂಪತಿ ಮಗನಾಗಿ ಜನಿಸಿದ್ದರು.
ರಾಷ್ಟ್ರಪಿತ ಮಹಾತ್ಮಾಗಾಂಧೀಜಿ ನೇತೃತ್ವದಲ್ಲಿ 1942 ರಲ್ಲಿ ಆಯೋಜಿಸಿದ ಭಾರತ ಬಿಟ್ಟುತೊಲಗಿ ಚಳುವಳಿಯಲ್ಲಿ ಅವರು ಸಕ್ರಿಯವಾಗಿ ಭಾಗವಹಿಸಿದ್ದರು.
ಮಂಗಳೂರಿನ ಗಾಂಧಿಪಾರ್ಕ್‌ನಲ್ಲಿ ನಡೆದ ಚಳುವಳಿಗೆ ಪಡಂಗಡಿಯಿಂದ ತನ್ನ ಶಿಕ್ಷಕ ಕುಂಞಣ್ಣ ರೈ ಅವರ ಸೈಕಲ್‌ನಲ್ಲಿ ಏರಿ ಮಂಗಳೂರಿಗೆ ತೆರಳಿ ಧರಣಿ ಕುಳಿತಿದ್ದರು.
ಪೊಲೀಸರು ಲಾಠಿ ಬೀಸಿದಾಗ ಅಂಜದೆ ಬ್ರಿಟಿಷರ ವಿರುದ್ಧ ಮತ್ತು ಅವರ ತೀರ್ಪಿನ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಹೋರಾಟದಲ್ಲಿ ಧೋತಿ ಹರಿದಾಗ ಖಾದಿ ಬಟ್ಟೆ ಖರೀದಿಸಿ ಧರಿಸಿದವರು ಇಂದಿನವರೆಗೆ ಖಾದಿ ದಿರಿಸನ್ನೇ ತೊಡುತ್ತಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.