logo
WhatsApp Image 2026-04-02 at 14.46.04.jpeg
hindalco everlast.jpeg

ಬಿಗ್ ನ್ಯೂಸ್ ::::: ವಾಯುಭಾರ ಕುಸಿತ: ಭಾರಿ ಮಳೆಯಾಗುವ ಸಾಧ್ಯತೆ: ಎರಡು ದಿನ ಎಲ್ಲೋ ಎಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಟ್ರೆಂಡಿಂಗ್
share whatsappshare facebookshare telegram
16 Oct 2021
post image

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ

ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 17ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.