



ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಸರಕಾರಿ ನೌಕರರಿಗೆ ಬಿಗ್ ಶಾಕ್..!!
ಬೆಂಗಳೂರು : ರಾಜ್ಯದಲ್ಲಿ ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಸರಕಾರಿ ನೌಕರರಿಗೆ ಆಹಾರ ಇಲಾಖೆ ಬಿಗ್ ಶಾಕ್ ಕೊಟ್ಟಿದೆ. ಅನರ್ಹ ಬಿಪಿಎಲ್ ಕಾರ್ಡ್‌ದಾರರನ್ನು ಗುರುತಿಸುವ ಕಾರ್ಯಕ್ಕೆ ಮುಂದಾಗಿದೆ. ಒಂದೊಮ್ಮೆ ಅನರ್ಹ ಬಿಪಿಎಲ್ ಕಾರ್ಡ್ ಹಿಂದಿರುಗಿಸದೇ ಇದ್ರೆ ಭಾರೀ ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನು ನೀಡಿದೆ.
ಈಗಾಗಲೇ ಆಧಾರ್ ಜೊತೆಗೆ ಬಿಪಿಎಲ್ ಕಾರ್ಡ್‌ಗಳನ್ನು ಲಿಂಕ್ ಮಾಡಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸೂಚನೆಯನ್ನು ನೀಡಿದ್ದು, ಪಡಿತರ ಕಾರ್ಡ್ ಜೊತೆ ಆಧಾರ್ ಲಿಂಕ್ ಕಾರ್ಯ ರಾಜ್ಯದಾದ್ಯಂತ ನಡೆಯುತ್ತಿದೆ. ಈ ಕಾರ್ಯ ಮುಗಿದ ನಂತರದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ಪಟ್ಟಿ ಸಿದ್ದವಾಗಲಿದೆ.
ಒಂದೊಮ್ಮೆ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದಿದ್ದರೆ ಅಂತವರ ವಿರುದ್ದ ಕಠಿಣ ಕ್ರಮ ಜರುಗಿಸಲು ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಬಿಪಿಎಲ್ ಕಾರ್ಡ್‌ನಿಂದ ಎಷ್ಟು ವರ್ಷಗಳಿಂದ ರೇಷನ್ ಪಡೆದಿದ್ದಾರೋ ಅಷ್ಟೂ ವರ್ಷಗಳ ಆಹಾರ ಸಾಮಾಗ್ರಿಯ ಮೌಲ್ಯದ ದಂಡ ಕಟ್ಟಬೇಕಾಗುತ್ತದೆ. ಅಲ್ಲದೇ ಅನರ್ಹ ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾವಣೆಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.