



ಬ್ರಹ್ಮಾವರ : ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಮಾಹಿತಿ ಬಿಗ್ ಟ್ವಿಸ್ಟ್ ಸಿಕ್ಕಿದೆ
ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. . ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ . ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು ಪೆಟ್ರೊಲ್ ಸುರಿದುಕೊಂಡು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ.ವಿರೋಧ ವ್ಯಕ್ತವಾದ ಬಳಿಕ ಆತಂಕ ವ್ಯಕ್ತವಾದಾಗ ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ ಬಾಟಲ್ ನಲ್ಲಿದ್ದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ..ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.