logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ ಐವರು ಅರೆಸ್ಟ್!

ಟ್ರೆಂಡಿಂಗ್
share whatsappshare facebookshare telegram
22 Oct 2021
post image

 ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಅವರ ಪತ್ನಿ ಸೇರಿದಂತೆ ಐವರನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಪತ್ನಿ ಮಮತಾ (34), ಆಕೆಯ ಪರಿಚಿತರಾಗಿರುವ ಕುಮಾರ್ ಹಾಗೂ ದಿನಕರ ಎಂಬುವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಇಬ್ಬರು ಬಾಲಕರನ್ನು ರೀಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಏನಿದು ಪ್ರಕರಣ? ನಾಗರಾಜ್ ಸೋಮವಾರ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ನಿ ಮಮತಾ ಪೊಲೀಸರಿಗೆ ದೂರು ನೀಡಿದ್ದರು. ನಾಗರಾಜ್ ವಿಪರೀತ ಕುಡಿತದ ಚಟ ಹೊಂದಿದ್ದರಿಂದಲೇ ಜಿಗುಪ್ಸೆಗೊಂಡು ಸಾವನ್ನಪ್ಪಿರುವುದಾಗಿಯೂ ದೂರಿನಲ್ಲಿ ವಿವರಿಸಲಾಗಿತ್ತು. ಮೊದಲು ಪೊಲೀಸರು ಪತ್ನಿಯ ಹೇಳಿಕೆಯಂತೆಯೇ ದೂರ ದಾಖಲಿಸಿಕೊಂಡಿದ್ದರು. ಮೃತದೇಹದ ಮೇಲೆ ಗಾಯ: ಸಹೋದರಿಗೆ ಅನುಮಾನ! ನಾಗರಾಜ ಅವರ ಸಾವಿನ ಸುದ್ದಿ ತಿಳಿದು ಅವರ ಸಹೋದರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಳಗೋಡು ಮಾಲ್ವೆ ಗ್ರಾಮದ ನಿವಾಸಿ ನಾಗರತ್ನ ಹಾಗೂ ಸಂಬಂಧಿಕರು ಶವಗಾರದಲ್ಲಿರುವ ಮೃತದೇಹವನ್ನು ಪರೀಕ್ಷಿಸಿದಾಗ ಮೃತದೇಹದ ಮೈ ಮೇಲೆ ಹಾಗೂ ಕುತ್ತಿಗೆ ಭಾಗಗಳಲ್ಲಿ ಗಾಯಗಳಾಗಿತ್ತು. ಅಲ್ಲದೇ ನಾಗರಾಜ್ ಕೆಲ ದಿನಗಳ ಹಿಂದೆ ಸಹೋದರಿಗೆ ಕರೆ ಮಾಡಿ ಪತ್ನಿ ಮತ್ತು ಕೆಲವರು ಸೇರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಹೋದರಿ ಜೊತೆ ತಮ್ಮ‌ ನೋವುಗಳನ್ನು ತೋಡಿಕೊಂಡಿದ್ದರು. ಹೀಗಾಗಿ ಇದೊಂದು ವ್ಯವಸ್ಥಿತವಾದ ಕೊಲೆ ಎಂದು ಸಂಶಯ ವ್ಯಕ್ತಪಡಿಸಿದ ಸಹೋದರಿ ನಾಗರತ್ನ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಸಹೋದರಿ ನೀಡಿದ ದೂರಿನನ್ವಯ ಶಂಕರನಾರಾಯಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳನ್ನು ಕ್ಷಿಪ್ರಗತಿಯಲ್ಲಿ ಬಂಧಿಸಿದ್ದಾರೆ‌. ಲವ್ ಮ್ಯಾರೇಜ್ ಕೊನೆಗೂ ಡ್ಯಾಮೇಜ್! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಾಗರಾಜ ಹಾಗೂ ಮಮತಾ ಅವರು ಕಳೆದ ಹತ್ತು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ತಮ್ಮ ಮೂವರು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದರು. ಬರಬರುತ್ತಾ ನಾಗರಾಜ ವಿಪರೀತ ಕುಡಿದು, ಮನೆಯಲ್ಲಿ ದಿನಾಲೂ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಇವರಿಬ್ಬರ ಸಂಸಾರದಲ್ಲಿ ಬಿರುಕು ಮೂಡಿತ್ತು ಎನ್ನಲಾಗಿದೆ. ನಾಗರಾಜ ಅವರ ಕೊಲೆಗೆ ಅಕ್ರಮ ಸಂಬಂಧ ಕಾರಣ ಎನ್ನುವ ಮಾತುಗಳು ಸ್ಥಳೀಯವಾಗಿ ಕೇಳಿ ಬರುತ್ತಿವೆಯಾದರೂ ಈ ಬಗ್ಗೆ ಸ್ಪಷ್ಟ ಮಾಹಿತಿ ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.