logo
WhatsApp Image 2026-04-02 at 14.46.04.jpeg
hindalco everlast.jpeg

ಹಿರ್ಗಾನದಲ್ಲಿ ಆಟೊ ರಿಕ್ಷಾಕ್ಕೆ ಬೈಕ್ ಡಿಕ್ಕಿ: ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಸವಾರರಿಬ್ಬರಿಗೆ ಸಾರ್ವಜನಿಕರಿಂದ ತರಾಟೆ

ಟ್ರೆಂಡಿಂಗ್
share whatsappshare facebookshare telegram
8 Aug 2022
post image

ಕಾರ್ಕಳ: ಆಟೊ ರಿಕ್ಷಾಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರಿಬ್ಬರು ಹಾರ್ಜಡ್ಡು ನಿವಾಸಿಗಳೆಂದು ತಿಳಿದುಬಂದಿದ್ದು, ಇವರು ಮದ್ಯಪಾನ ಮಾಡಿ ಬೈಕ್ ಸವಾರಿ ಮಾಡಿಕೊಂಡು ಹೋಗುತ್ತಿದ್ದರು. ಹಿರ್ಗಾನ ಮುಖ್ಯ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮದ್ಯ ಅಮಲಿನಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಬೈಕ್ ಸಮೇತ ರಸ್ತೆಗೆ ಬಿದ್ದ ಸವಾರರಿಬ್ಬರು ಸಣ್ಣಪುಟ್ಟಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆಟೊ ಚಾಲಕ ಕೂಡ ಸ್ಥಳೀಯರಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಒಟ್ಟುಗೂಡಿದ್ದು, ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಬೈಕ್ ಸವಾರರಿಬ್ಬರನ್ನು ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.