



ಕುಂದಾಪುರ: ಬೈಕ್ ವೊಂದು ಡಿಕ್ಕಿಯಾದ ಪರಿಣಾಮ ಟ್ರಕ್‌ಗೆ ಸೂಚನೆ ನೀಡಲು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಸಹಿತ ಮೂವರು ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದ ಶ್ರೀಸಾಯಿ ಟ್ರಾನ್ಸ್‌ಪೋರ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅರುಣ್ ಎಂಬಾತನು ಜುಲೈ 20ರಂದು ರಾತ್ರಿ ತನ್ನ ಬೈಕ್ ನಲ್ಲಿ ಮಾಲತಿ ಎಂಬವರನ್ನು ಸಹ ಸವಾರರನ್ನಾಗಿ ಕುರಿಸಿಕೊಂಡು ತೆಕ್ಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಅತೀವೇಗ ಸವಾರಿ ಮಾಡಿಕೊಂಡು ಬಂದು, ಶ್ರೀ ಸಾಯಿ ಟ್ರಾನ್ಸ್‌ಪೋರ್ಟ್ ಬಳಿ ಹಿಮ್ಮುಖವಾಗಿ ಬರುತ್ತಿದ್ದ ಟ್ರಕ್‌ಗೆ ಸೂಚನೆ ನಿಂತುಕೊಂಡಿದ್ದ ಇಂದಲ್‌ಕುಮಾರ್ ಚೌಹಣ್ ಎಂಬರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾನ ಬೈಕ್ ಸಮೇತ ರಸ್ತೆಗೆ ಬಿದ್ದ ಅರುಣ್ ಹಾಗೂ ಮಾಲತಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿದ್ದ ಇಂದಲ್ ಕುಮಾರ್ ಕೊಟೇಶ್ವರ ಎನ್. ಆರ್‌ಆಚಾರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.