


ಬೆಂಗಳೂರು:** ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬಳಕೆಗೆ ಅವಕಾಶ ಇರುವುದಿಲ್ಲ. ಸುರಕ್ಷಿತವಲ್ಲದ ಅರ್ಧ ಹೆಲ್ಮೆಟ್‌ಗಳ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಕಾಸಸೌಧದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ನೇತೃತ್ವದಲ್ಲಿ ನಡೆದ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಉಲ್ಲಂಘನೆ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅರ್ಧ ಹೆಲ್ಮೆಟ್‌ಗಳ ಉತ್ಪಾದನೆ ಹಾಗೂ ತಯಾರಿಕೆಯನ್ನು ನಿಷೇಧಿಸಲು ಸರ್ಕಾರ ಮುಂದಾಗಿದ್ದು, ನಿಯಮ ಉಲ್ಲಂಘಿಸಿ ಇಂತಹ ಹೆಲ್ಮೆಟ್‌ಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕಂಪನಿಗಳ ವಿರುದ್ಧವೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಸಂಚಾರ ನಿಯಮಗಳ ಪ್ರಕಾರ ಹಾಫ್ ಹೆಲ್ಮೆಟ್ ಧರಿಸಿ ಸಂಚರಿಸಲು ಅವಕಾಶವಿಲ್ಲ. ಆದರೂ ಇಂತಹ ಹೆಲ್ಮೆಟ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಕೆಲವರು ಸಂಚಾರ ನಿಯಮಗಳಿಂದ ತಪ್ಪಿಸಿಕೊಳ್ಳಲು ಅವುಗಳನ್ನು ಬಳಸುತ್ತಿದ್ದಾರೆ.
ಕೇವಲ ಹಾಫ್ ಹೆಲ್ಮೆಟ್ ಧರಿಸುವ ಸವಾರರ ವಿರುದ್ಧವಷ್ಟೇ ಅಲ್ಲದೆ, ನಿಯಮ ಉಲ್ಲಂಘಿಸಿ ಅವುಗಳನ್ನು ತಯಾರಿಸಿ ಮಾರಾಟ ಮಾಡುವ ತಯಾರಿಕಾ ಕಂಪನಿಗಳ ವಿರುದ್ಧವೂ ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.