



ನವದೆಹಲಿ: ಹಕ್ಕಿಯೊಂದು ಡಿಕ್ಕಿಯಾದ ಪರಿಣಾಮ ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಫೆಡೆಕ್ಸ್ ವಿಮಾನಕ್ಕೆ ಟೇಕ್ ಆಫ್ ಆದ ಕೆಲವೇ ಸಮಯದಲ್ಲಿ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಶನಿವಾರ ಬೆಳಗ್ಗೆ 10.46ಕ್ಕೆ ಎಫ್‌ಎಕ್ಸ್ 5279 ಫ್ಲೈಟ್ ಟೇಕ್ ಆಫ್ ಕೆಲವೇ ಕ್ಷಣಗಳಲ್ಲಿ 1000 ಅಡಿ ಎತ್ತರದಲ್ಲಿ ಹಕ್ಕಿಯೊಂದು ಡಿಕ್ಕಿ ಹೊಡೆದ ನಂತರ ಸಂಪೂರ್ಣ ತುರ್ತು ಲ್ಯಾಂಡಿಂಗ್ ಘೋಷಿಸಲಾಯಿತು.
ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ತಪಾಸಣೆ ಬಳಿಕ ಮಧ್ಯಾಹ್ನ ಮತ್ತೆ ಟೇಕಾಫ್ ಆಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತಿಳಿಸಿದೆ.
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಲ್ಲಿ ದೆಹಲಿ ವಿಮಾನ ನಿಲ್ದಾಣದಿಂದ 22 ವಿಮಾನಗಳ ಮಾರ್ಗ ಬದಲಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.