logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರಿಗೆ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ: 148 ಪ್ರಯಾಣಿಕರು ಸುರಕ್ಷಿತ

ಟ್ರೆಂಡಿಂಗ್
share whatsappshare facebookshare telegram
20 Oct 2026
post image

ಬೆಂಗಳೂರು: ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಸೋಮವಾರ ಹಕ್ಕಿ ಡಿಕ್ಕಿ ಹೊಡೆದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ಇಳಿದಿದ್ದು, ಅದರಲ್ಲಿದ್ದ 148 ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ.

ಹಕ್ಕಿ ಡಿಕ್ಕಿ ಹೊಡೆದಿದ್ದರೂ ವಿಮಾನವು ತನ್ನ ಪ್ರಯಾಣವನ್ನು ಪೂರ್ಣಗೊಳಿಸಿದೆ. ಭೂಸ್ಪರ್ಶದ ಬಳಿಕ ವಿಮಾನವನ್ನು ಪಾರ್ಕಿಂಗ್ ಸ್ಟ್ಯಾಂಡ್‌ಗೆ ಸ್ಥಳಾಂತರಿಸಲಾಯಿತು. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಥವಾ ಸಿಬ್ಬಂದಿಗೆ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಇದೇ ರೀತಿಯ ಘಟನೆ ಶನಿವಾರವೂ ಸಂಭವಿಸಿತ್ತು. ದುಬೈನಿಂದ ಆಗಮಿಸಿದ್ದ ಎಮಿರೇಟ್ಸ್ ವಿಮಾನವು ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಹಕ್ಕಿ ಡಿಕ್ಕಿ ಹೊಡೆದಿತ್ತು. ಮಧ್ಯಾಹ್ನ 3.10ರ ಸುಮಾರಿಗೆ ಟರ್ಮಿನಲ್ 3ರ ಸಮೀಪದ ರನ್‌ವೇಯಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ ವಿಮಾನದ ಮುಂದಿನ ಹಾರಾಟದಲ್ಲಿ ವಿಳಂಬ ಉಂಟಾಗಿತ್ತು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.