

ನವದೆಹಲಿ: ಬಿಸ್ಲೇರಿ (Bisleri) ಕುಡಿಯುವ ನೀರಿನ ಗುಣಮಟ್ಟದ ವಿವಾದ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದೆ. ದೇಶದಲ್ಲಿ ಮಾರಾಟವಾಗುತ್ತಿರುವ ವಿವಿಧ ಬ್ರ್ಯಾಂಡ್ಗಳ ಬಾಟಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಮೂಲಕ ಗುಣಮಟ್ಟದ ನಿಯಮ ಉಲ್ಲಂಘಿಸುವ ಕಂಪನಿಗಳ ವಿರುದ್ಧ ಕ್ರಮಕ್ಕೆ ಪ್ರಾಧಿಕಾರ ಮುಂದಾಗಿದೆ. ಎಫ್ಎಸ್ಎಸ್ಎಐ ಈಗಾಗಲೇ ಹಲವು ಕಂಪನಿಗಳ ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದು, ಇತ್ತೀಚಿನ ಪರಿಶೀಲನಾ ಕಾರ್ಯಾಚರಣೆಯಲ್ಲಿ ವಿವಿಧ ಬ್ರ್ಯಾಂಡ್ಗಳ ಮಾದರಿಗಳನ್ನು ಯಾದೃಚ್ಛಿಕವಾಗಿ ಸಂಗ್ರಹಿಸಲಾಗಿದೆ. ಪ್ರಯೋಗಾಲಯ ಪರೀಕ್ಷೆಗಳ ವರದಿಗಳು ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.