logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೆಪಿ ಮೊದಲ‌ ಪಟ್ಟಿ ರಿಲೀಸ್: ಉಡುಪಿಗೆ ಯಶ್ ಪಾಲ್, ಕಾಪುಗೆ ಸುರೇಶ್ ಶೆಟ್ಟಿ ಗುರ್ಮೆ, ಕುಂದಾಪುರಕ್ಕೆ ಕಿರಣ್ ಕೊಡ್ಗಿ

ಟ್ರೆಂಡಿಂಗ್
share whatsappshare facebookshare telegram
12 Apr 2023
post image

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ.

ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಹೇಳಿದರು. ಶಿಗ್ಗಾಂವ್ ನಲ್ಲಿ ಬಸವರಾಜ್ ಬೊಮ್ಮಾಯಿ, ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೆ ಸ್ಥಾನ ಲಭ್ಯವಾಗಿದೆ.

ಉಡುಪಿ ಕ್ಷೇತ್ರ ಯಶ್ಫಾಲ್ ಸುವರ್ಣ, ಕುಂದಾಪುರ ಕಿರಣ್ ಕೊಡ್ಗಿ, ಕಾಪು ಗುರ್ಮೆ ಸುರೇಶ್ ಶೆಟ್ಟಿ ಮತ್ತು ಕಾರ್ಕಳದಿಂದ ಸುನೀಲ್ ಕುಮಾರ್ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.