logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ‌ ಪ್ರಕರಣ: ತನಿಖೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಟ್ರೆಂಡಿಂಗ್
share whatsappshare facebookshare telegram
28 Jul 2022
post image

 

ಬೆಳ್ಳಾರೆ: ಜಿಲ್ಲಾ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು , ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಪೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.

ಬೆಳ್ಳಾರೆಯಲ್ಲಿ ಮಾದ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣದ ಕುರಿತಾಗಿ ಮುಖ್ಯಮಂತ್ರಿಗಳು ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯಪಡೆದು ಆರು ತಂಡಗಳನ್ನು ರಚನೆ ಮಾಡಿದ್ದೇವೆ. ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಅವಕಾಶ ಕೊಡಬೇಕು ಎಂದು ಅವರು ವಿನಂತಿಸಿದರು.

ಪೊಲೀಸರು ವಶಕ್ಕೆ ಪಡೆದವರು ಕೃತ್ಯದಲ್ಲಿ ಭಾಗಿಯಾದವರೇ ಅಥಾವ ಪರೋಕ್ಷವಾಗಿ ಸಹಕರಿಸಿದವರೇ ಎಂಬ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಿಚಾರಣೆ ಹಂತದಲ್ಲಿ ನಾನು ಇಷ್ಟು ಮಾತ್ರ ಹೇಳಬಲ್ಲೆ ಎಂದು ಅಲೋಕ್ ಕುಮಾರ್ ತಿಳಿಸಿದರು.

ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಜ ನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು ಎಂದು ಲಾಠಿ ಚಾರ್ಜ್ ಘಟನೆಯ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದಾರೆ ಪರಿಸ್ಥಿತಿ ಹತೋಟಿಯಲ್ಲಿದೆ. ಜನರು ಯಾರು ಗುಂಪು ಕಟ್ಟಿ ಓಡಾಡಬಾರದು ಎಂದು ತಿಳಿಸಿದರು..

ಸಹಜ ಸ್ಥಿತಿಗೆ ಮರಳುತ್ತಿದೆ ಸುಳ್ಯ ಕಡಬ ಪುತ್ತೂರು ತಾಲೂಕುಗಳು;

ಹಿಂದು ಸಂಘಟನೆಗಳು ನೀಡಿದ್ದ ಸ್ವಯಂ ಪ್ರೇರಿತ ಬಂದ್ ಗೆ ಸಂಪೂರ್ಣ ಬಂದ್ ವ್ಯಕ್ತವಾಗಿತ್ತು. ಇಂದು ಜುಲೈ 28 ರಂದು ಗುರುವಾರ ಮೂರು ತಾಲೂಕುಗಳಲ್ಲಿ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿದ್ದು, ಜನ ಜೀವನ ಮತ್ತೆ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿವೆ. ಆದರೂ ಪರಿಸರದುದ್ದಕ್ಕೂ ಶೋಕದ ಛಾಯೆ ಗಾಢವಾಗಿಯೇ ಇನ್ನೂ ಆವರಿಸಿದೆ. ದ.ಕ ಜಿಲ್ಲೆಯಾದ್ಯಂತ ಪೋಲಿಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.

ರಾಜ್ಯದಾದ್ಯಂತ ಬಿಜೆಪಿ ನಾಯಕರ ವಿರುದ್ಧ ಕಿಚ್ಚು:ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ ಇದೀಗ ಕಾರ್ಯಕರ್ತರ ಹಾಗೂ ಮುಖಂಡರ ರಾಜೀನಾಮೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ.ಬಿಜೆಪಿ ಯುವ ನಾಯಕರು ಸಾಮೂಹಿಕ ರಾಜಿನಾಮೆ ನೀಡುತಿದ್ದು ನುಂಗಲಾರದ ತುತ್ತಾಗಿ ಪರಿಣಮಿಸಿದೆ

ತನಿಖೆ ಹಂತ: ದ.ಕ ಪೋಲೀಸರು ಈಗಾಗಲೇ 6 ತನಿಖಾ ತಂಡಗಳನ್ನು ರಚಿಸಿದ್ದು ಅನೇಕರನ್ನು ವಿಚಾರಣೆಗೆ ಒಳಪಡಿಸುತ್ತಿದೆ. ಜುಲೈ 27 ರ ರಾತ್ರಿ ಪೋಲೀಸರು ಸ್ಥಳೀಯ ಬೂಡು ಪ್ರದೇಶದ ಅರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ . ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತಿದ್ದು 15 ಜನರನ್ನು ವಶಕ್ಕೆ ಪಡೆಯಲಾಗಿದೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.