



ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ವತಿಯಿಂದ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಸತತ 27 ಬಾರಿ ರಕ್ತ ನೀಡಿದ ಉಡುಪಿ ವಲಯದ ಮಾಜಿ ಅಧ್ಯಕ್ಷರಾದ ಸುಂದರ ಪೂಜಾರಿ ಕೊಳಲಗಿರಿ ಇವರಿಗೆ ಅವರ ಸ್ವ ಗ್ರಹದಲ್ಲಿ ಸಂಘದ ಅಧ್ಯಕ್ಷ ಸುಧೀರ್ ಎಂ ಶೆಟ್ಟಿಯವರು ಶಾಲು ಹೊದಿಸಿ, ಫಲ ಪುಷ್ಪ, ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭ ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿ ರಮೇಶ್ ಭಟ್ ಎಲ್ಲೂರು, ಸುರಭಿ ರತನ್, ಅನಿಶ್ ಶೆಟ್ಟಿಗಾರ್, ಪ್ರಕಾಶ್, ಉದಯ ನಾಯ್ಕ್, ಮಂಜು ಪರ್ಕಳ, ಸುಂದರ್ ಪೂಜಾರಿಯವರ ಕೂಟುಂಬಸ್ತರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.