



ಮಾಸ್ಕೋ: ಉಕ್ರೇನ್ ವಿರುದ್ಧ ಯುದ್ಧ ಸಾರಿದಾಗಿನಿಂದಲೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆರೋಗ್ಯ ವಿಚಾರ ನಿರಂತರವಾಗಿ ಚರ್ಚೆಯಲ್ಲಿದೆ.
ಪುಟಿನ್‌ಗೆ ಅತಿಯಾದ ತಲೆನೋವು, ದೃಷ್ಟಿ ಮಂಜಾಗುವುದು ಹಾಗೂ ನಾಲಿಗೆಯಲ್ಲಿ ಮರಗಟ್ಟುವಿಕೆ ಉಂಟಾಗುತ್ತಿದೆ. ಪುಟಿನ್ ಈಗಾಗಲೇ ಬಲಗೈ ಮತ್ತು ಬಲಗಾಲಿನ ಭಾಗಶಃ ಸ್ವಾಧೀನ ಕಳೆದುಕೊಳ್ಳುತ್ತಿದ್ದಾರೆ. ಅವರಿಗೆ ತುರ್ತು ವೈದ್ಯಕೀಯ ಆರೈಕೆ ಅಗತ್ಯವಿದೆ ಎಂದು ಹೇಳಿದ್ದಾರೆ. ಆದರೆ, ಕ್ರೆಮ್ಲಿನ್ ಮತ್ತು ರಷ್ಯಾದ ಆರೋಗ್ಯ ಸಚಿವರು ಪುಟಿನ್ ಆರೋಗ್ಯವಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಪುಟಿನ್ ವಿಶ್ರಾಂತಿ ಪಡೆಯಲು ನಿರಾಕರಿಸಿ, ಉಕ್ರೇನ್ ವಿರುದ್ಧ ಯುದ್ಧದ ಬೆಳವಣಿಗೆಯಲ್ಲಿ ತೊಡಗಿಕೊಂಡರು. ಅವರು ಕೊಂಚ ಸುಧಾರಿಸಿಕೊಳ್ಳುತ್ತಿದ್ದಂತೆಯೇ ವೈದ್ಯರ ಆರೈಕೆ ಬಗ್ಗೆ ನಿರ್ಲಕ್ಷ್ಯ ತೋರಿದರು ಎಂದು ಅವರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.