



ಕಾಬುಲ್: ತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ.
ಸೋಮವಾರ ಮಧ್ಯಾಹ್ನ ಆಫ್ಘಾನಿಸ್ತಾನ ವಿದೇಶಾಂಗ ಸಚಿವಾಲಯದ ಕಚೇರಿ ಬಳಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, ಈ ಘಟನೆಯಲ್ಲಿ ಕನಿಷ್ಟ 6 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಾಫಿ ಟಾಕೋರ್ ಮಾಹಿತಿ ನೀಡಿದ್ದಾರೆ.
ಸಚಿವಾಲಯದ ಬಳಿಯ ಭದ್ರತಾ ತಪಾಸಣಾ ಕೇಂದ್ರದಲ್ಲಿ ಆತ್ಮಹತ್ಯಾ ದಾಳಿಕೋರನನ್ನು ಗುರುತಿಸಲಾಗಿತ್ತು ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ. “ಮಲಿಕ್ ಅಸ್ಗರ್ ಚೌಕದಲ್ಲಿ … ಗುರಿಯನ್ನು ತಲುಪುವ ಮೊದಲು ಆತ್ಮಹತ್ಯಾ ದಾಳಿಕೋರನನ್ನು ಚೆಕ್ ಪಾಯಿಂಟ್ನಲ್ಲಿ ಗುರುತಿಸಲಾಯಿತು ಮತ್ತು ಗುಂಡಿಟ್ಟು ಕೊಲ್ಲಲಾಯಿತು, ಆದರೆ ಅವನು ಕೆಳಗೆ ಬೀಳುತ್ತಿದ್ದಂತೆಯೇ ಆತ ಧರಿಸಿದ್ದ ಸ್ಫೋಟಕಗಳು ಸ್ಫೋಟಗೊಂಡವು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.