



ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಏಪ್ರಿಲ್ 2024 ರ ಮಾಹೆಯಲ್ಲಿ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಶೇ.50 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ ಹಾಗೂ ಆನ್‌ಲೈನ್ www.kuvempubhashabharathi.karnataka.gov.in ಮೂಲಕ ಕೂಡ ಶೇ.50 ರ ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯವಿದ್ದು, ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.