logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಎ.೧ ರಿಂದ 15 ವರೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಟ್ರೆಂಡಿಂಗ್
share whatsappshare facebookshare telegram
24 Mar 2022
post image

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಗಳು ಸಂಪನ್ನಗೊ0ಡಿದ್ದು ಶಿಲೆದಾರು ಶಿಲ್ಪಗಳಿಂದ ಕೂಡಿದ ದೇವಾಲಯದಲ್ಲಿ ಶ್ರೀ ಪ್ರಸನ್ನ ಗಣಪತಿ, ಶ್ರೀ ಭದ್ರಕಾಳಿ, ಶ್ರೀ ನಾಗದೇವರ ಸಹಿತ ಶ್ರೀ ಮಹಾಲಕ್ಷಿ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳನ್ನೊಳಗೊoಡ ವೈಧಿಕ ವಿಧಿ ವಿಧಾನಗಳನ್ನು ಇದೇ ಬರುವ ಎಪ್ರಿಲ್ ೧ ರಿಂದ ಎಪ್ರಿಲ್ ೧೫ ರವರೆಗೆ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಶ್ರೀ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ, ಹಿರಿಯ ಅರ್ಚಕರಾದ ವೆಂಕಟನರಸಿAಹ ಉಪಾಧ್ಯಾಯ ಹಾಗೂ ರಾಘವೇಂದ್ರ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಮತ್ತು ಯತಿವರೇಣ್ಯರ ಶುಭಾಶೀರ್ವಾದಗಳೊಂದಿಗೆ ವೈಭವೋಪೇತವಾಗಿ ನಡೆಯಲಿದೆ ಎಂದು ಉಚ್ಚಿಲದ ಮೊಗವೀರ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಾಡೋಜ ಡಾ| ಜಿ ಶಂಕರ್ ತಿಳಿಸಿದರು

ಪ್ರಮುಖ ಧಾರ್ಮೀಕ ಕಾರ್ಯಕ್ರಮಗಳು: ಹೊರೆಕಾಣಿಕೆ: ರಾಜ್ಯ ಹಾಗೂ ಹೊರರಾಜ್ಯಗಳಿಂದ ೨ ರಿಂದ ೩ ಲಕ್ಷದಷ್ಟು ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು ಆಗಮಿಸುವ ಎಲ್ಲಾ ಭಕ್ತಾಧಿಗಳಿಗೂ ದಿನಂಪ್ರತಿ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಪ್ರಯುಕ್ತ ಮಾರ್ಚ್ ೨೭ ಕ್ಕೆ ಅವಿಭಜಿತ ದ. ಕ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಂದ ಪ್ರಸಾದದ ರೂಪದಲ್ಲಿ ಹೊರೆಕಾಣಿಕೆಯು ಕ್ಷೇತ್ರವನ್ನು ತಲುಪಲಿದೆ. ಈಗಾಗಲೇ ಹೈದ್ರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ ಇತರ ಭಾಗಗಳಿಂದ ಹೊರೆಕಾಣಿಕೆಗಳು ದೇವಸ್ಥಾನಕ್ಕೆ ತಲುಪಿದೆ. ಕರಾವಳಿ ಭಾಗದ ಭಕ್ತಾಧಿಗಳ ಹೊರಕಾಣಿಕೆಯು ೨೦೦೦ಕ್ಕೂ ಮಿಕ್ಕಿದ ವಾಹನಗಳ ಮೂಲಕ ದೇವಸ್ಥಾನದ ಉತ್ತರ ಭಾಗದ ಮೆರವಣಿಗೆಯು ಮೂಳೂರಿನಿಂದ ಹಾಗೂ ದಕ್ಷಿಣ ಭಾಗದ ಮೆರವಣಿಗೆಯು ತೆಂಕ ಎರ್ಮಾಳ್‌ನಿಂದ ಹೊರಟು ವಿವಿಧ ರೀತಿಯ ಟ್ಯಾಬ್ಲೋ, ಚೆಂಡೆ, ಭಜನಾಕುಣಿತ ಮುಂತಾದ ಬಿರುದಾವಳಿಗಳೊಂದಿಗೆ ದೇವಸ್ಥಾನ ತಲುಪಲಿದೆ. ಅನ್ನ ಛತ್ರ ಹಾಗೂ ಪಾರ್ಕಿಂಗ್: ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ನೂಕು ನುಗ್ಗಲಾಗದಂತೆ ಸುಮಾರು ೧ ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಅನ್ನಛತ್ರದ ಚಪ್ಪರ ನಿರ್ಮಿಸಿ ಎಲೆ ಊಟ ಮತ್ತು ಬಫೆ ಊಟಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹಾಗೂ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳ ವಾಹನ ನಿಲುಗಡೆಗೆ ಬೇಕಾಗುವಷ್ಟು ಪಾರ್ಕಿಂಗ್ ಜಾಗದ ಸಿದ್ದತೆ ಮಾಡಿಕೊಳ್ಳಲಾಗಿದೆ. ರಾಜಗೋಪುರ ಹಾಗೂ ತೀರ್ಥ ಕೆರೆ ಉದ್ಘಾಟನೆ ಎಪ್ರಿಲ್ ೧: ನೂತನವಾಗಿ ನಿರ್ಮಾಣಗೊಂಡ ಭವ್ಯ ರಾಜಗೋಪುರ ಹಾಗೂ ಸರಕಾರದ ಅನುಧಾನದೊಂದಿಗೆ ನಿರ್ಮಾಣಗೊಂಡ ಲಕ್ಷ್ಮಿ ತೀರ್ಥ ಕೆರೆಯು ಎಪ್ರಿಲ್ ೧ರ ಸಂಜೆ ೫ ಗಂಟೆಗೆ ಉದ್ಘಾಟನೆಗೊಳ್ಳಲಿದೆ. ದಿನಂಪ್ರತಿ ಕುಂಕುಮಾರ್ಚನೆಯೊAದಿಗೆ ಮಹಾಮಂಗಳಾರತಿ : ಎಪ್ರಿಲ್ ೨ರಿಂದ ಎಪ್ರಿಲ್ ೧೫ರತನಕ ಪ್ರತೀದಿನ ಸಂಜೆ ಗಂಟೆ ೪ ರಿಂದ ೫ರವರೆಗೆ ಸಾವಿರ ಸುಮಂಗಲೆಯರಿAದ ಕುಂಕುಮಾರ್ಚನೆಯೊAದಿಗೆ ಮಹಾಮಂಗಳಾರತಿ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ಮಹಾಲಕ್ಷಿ ದೇವಿಯ ಬಿಂಬ ಪ್ರತಿಷ್ಠೆ , ಸ್ವರ್ಣಕಲಶ ಪ್ರತಿಷ್ಠೆ ಹಾಗೂ ಮಹಾಅನ್ನಸಂತರ್ಪಣೆ ಎಪ್ರಿಲ್ ೬ರಂದು ನಡೆಯಲಿದೆ. ವಾರ್ಷಿಕ ರಥೋತ್ಸವ :ವರ್ಷಂಪ್ರತಿ ನಡೆಯುವ ಶ್ರೀಮಹಾಲಕ್ಷಿ ರಥೋತ್ಸವ ಹಾಗೂ ಮಹಾಅನ್ನಸಂತರ್ಪಣೆಯು ಎಪ್ರಿಲ್ ೧೩ರಂದು ನಡೆಯಲಿದೆ. ಚತುಃಪವಿತ್ರ ನಾಗಮಂಡಲ ಸೇವೆ : ಎಪ್ರಿಲ್ ೧೫ರ ರಾತ್ರಿ ಗಂಟೆ ೮.೦೦ಕ್ಕೆ ಹಾಲಿಟ್ಟು ಸೇವೆ ರಾತ್ರಿ ೯.೦೦ರಿಂದ ಚತುಃಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಎಪ್ರಿಲ್ ೧೬ರ ಬೆಳಗ್ಗೆ ಸಂಪೋಕ್ಷಣೆ, ಮಂತ್ರಾಕ್ಷತೆಯೊAದಿಗೆ ಪುನಃ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳು ಶುಭಾಂತ್ಯವಾಗಲಿದೆ. ನಿರ0ತರ ೧೫ದಿನಗಳ ಪರ್ಯಂತ ಧಾರ್ಮಿಕ ಸಭಾಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ, ಶ್ರೀ ಸಿದ್ಧರಾಮಯ್ಯ, ಶ್ರೀ ಹೆ ಚ್ ಡಿ ಕುಮಾರಸ್ವಾಮಿ, ಸಂಸದರುಗಳಾದ ಶ್ರೀನಳಿನ್ ಕುಮಾರ್ ಕಟೀಲ್ , ಶೋಭಾಕರಂದ್ಲಾಜೆ , ರಾಜ್ಯದ ಹಾಲಿ ಹಾಗೂ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ. ವಿವಿಧ ಮಠಾಧೀಶರುಗಳು ಮತ್ತು ಧಾರ್ಮಿಕ ಮುಖಂಡರುಗಳು ಆಶೀರ್ವಚನ ನೀಡಲಿದ್ದಾರೆ. ಸಾಂಸ್ಕçತಿಕ ಕಾರ್ಯಕ್ರಮದ ಅಂಗವಾಗಿ ಭಾರತ ಸರಕಾರ ಪ್ರಸ್ತುತ ಪಡಿಸುವ ದಕ್ಷಿಣ ವಲಯ ಸಾಂಸ್ಕçತಿಕ ಕೇಂದ್ರ ತಾಂಜವೂರು ಇವರು ಸಾದರ ಪಡಿಸುವ ೨೦ ರಾಜ್ಯಗಳ ಕಲಾವಿದರುಗಳ ಸಾಂಸ್ಕçತಿಕ ಉತ್ಸವ ಏರ್ಪಡಿಸಲಾಗಿದೆ. ರಾಜ್ಯದ ಹಾಗೂ ಸ್ಥಳೀಯ ಕಲಾವಿದರುಗಳಿಂದ ಪ್ರತೀ ದಿನ ಸಂಜೆ ನೃತ್ಯ ವೈವಿಧ್ಯ, ಯಕ್ಷಗಾನ , ನಾಟಕ ಮುಂತಾದ ಸಾಂಸ್ಕçತಿಕ ಕಾರ್ಯಕ್ರಮ ನಡೆಯಲಿದೆ ಮತ್ತು ಖ್ಯಾತ ಗಾಯಕರೂ , ಸಂಗೀತ ನಿರ್ದೇಶಕರೂ ಆದ ಗಾನಗಂಧರ್ವ ವಿಜಯ ಪ್ರಕಾಶರವರಿಂದ ಸಾಂಸ್ಕçತಿಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತೀದಿನ ಪೂರ್ವಾಹ್ನ ಗಂಟೆ ೧೧.೩೦ ರಿಂದ ರಾಜ್ಯದ ಖ್ಯಾತ ಕಲಾವಿದರುಗಳಿಂದ ಭಕ್ತಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.ಜಿ ಶಂಕರ್ ತಿಳಿಸಿದರು ಪತ್ರಿಕಾಗೋಷ್ಠಿಯಲ್ಲಿ ದ.ಕಮೊಗವೀರಮಹಾಜನಸಂಘ ಅಧ್ಯಕ್ಷ ಜಯ ಸಿ ಕೋಟ್ಯಾನ್ ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷಗುಂಡು ಬಿ ಅಮೀನ್ ,ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್ , ದ.ಕ ಮೊಗವೀರ ಮಹಾಜನ ಸಂಘ ಗೌರವ ಪ್ರಧಾನಕಾರ್ಯದರ್ಶಿ ಸುಧಾಕರ್ ಕುಂದರ್ , ದ.ಕ ಮೊಗವೀರ ಮಹಾಜನ ಸಂಘ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್ , ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ವಿನಯ್ ಕರ್ಕೇರ ,ಶಂಕರ್ ಸಾಲ್ಯಾನ್ ಪ್ರಧಾನ ಅರ್ಚಕ ರಾಘವೇಂದ್ರ ಉಪಧ್ಯಾಯ ಭರತ್ ಎರ್ಮಾಳ್, ಮೋಹನ್ ಕರ್ಕೇರ, ತೋನ್ಸೆ ಉಪಸ್ಥಿತರಿದ್ದರು

pic: Sachin Uchila

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.