logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ: ಬಿಲ್ಲಾಡಿ ಗ್ರಾಮದಲ್ಲಿ ಬೈಕ್'ಗೆ ಕಾರು ಡಿಕ್ಕಿ - ಸವಾರ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
15 Feb 2024
post image

ಬ್ರಹ್ಮಾವರ: ಮಾರುತಿ ಸ್ವಿಫ್ಟ್‌ ಡಿಸೈರ್‌ ಕಾರೊಂದು ರಾಯಲ್‌ ಎನ್‌ಫೀಲ್ಡ್‌ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಭಂಡಾರ್ತಿ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ಮಹೇಂದ್ರ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ನಲ್ಲಿ ಸೈಬ್ರಕಟ್ಟೆ ಕಡೆಯಿಂದ ಶಿರೂರು ಮೂರುಕೈ ಕಡೆಗೆ ಹೋಗುತ್ತಿದ್ದರು. ಬಿಲ್ಲಾಡಿ ಗ್ರಾಮದ ಭಂಡಾರ್ತಿ ಬಳಿ ತಲುಪಿದಾಗ ಗಣೇಶ್ ಎಂಬಾತ ತನ್ನ ಮಾರುತಿ ಸ್ವಿಫ್ಟ್‌ ಡಿಸೈರ್‌ ಕಾರನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಯಲ್ ಎನ್ ಫೀಲ್ಡ್ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ ಮಹೇಂದ್ರ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.