logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ: ಆಶ್ರಯ ಹೊಟೇಲ್‌ ಸಮೀಪ ಸ್ಕೂಟರ್ ಗೆ ಈಚರ್ ಲಾರಿ ಡಿಕ್ಕಿ: ಸವಾರನಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
16 Jul 2022
post image

ಸ್ಕೂಟರ್ ಗೆ ಈಚರ್ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡ ಘಟನೆ ಚಾಂತಾರು ಗ್ರಾಮದ ಬ್ರಹ್ಮಾವರ ಆಶ್ರಯ ಹೊಟೇಲ್‌ ಸಮೀಪ ಜುಲೈ 14ರಂದು ನಡೆದಿದೆ. ಸ್ಥಳೀಯ ನಿವಾಸಿ ಕೃಷ್ಣ ಅವರು, ನಿನ್ನೆ ಬ್ರಹ್ಮಾವರದಿಂದ ದೂಪದಕಟ್ಟೆಯಲ್ಲಿರುವ ತನ್ನ ಗ್ಯಾರೇಜ್‌ಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ಆಶ್ರಯ ಹೊಟೇಲ್‌ ನಿಂದ ಸ್ವಲ್ಪ ಮುಂದುಗಡೆ ತಲುಪಿದಾಗ ಈಚರ್‌ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿಯಾಗಿದೆ. ಇದರ ಪರಿಣಾಮ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಕೃಷ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷತನ ಮತ್ತು ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.