



ಬ್ರಹ್ಮಾವರ: ತಾಲೂಕಿನ ಮಣೂರು ಗ್ರಾಮದ ರಾಜಲಕ್ಷೀ ಸಭಾಭವನದ ಬಳಿಯ ಸರ್ವಿಸ್ ರಸ್ತೆಯಲ್ಲಿ ಕಾರಿನಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಅವರಿಂದ ಶಿಫ್ಟ್ ಕಾರು, 3,400 ರೂ. ನಗದು ಸಹಿತ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗಿಳಿಯಾರು ನಿವಾಸಿಗಳಾದ 47 ವರ್ಷದ ಪ್ರವೀಣ ಹಾಗೂ 42 ವರ್ಷದ ರಾಘವೇಂದ್ರ ಎಂಬವರು ಮಟ್ಕಾ ಜುಗಾರಿಗಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪಿಗಳು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.