



ಉಡುಪಿ: ಅವಿಭಜಿತ ಉಡುಪಿ ಮತ್ತು ದ.ಕ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇಲ್ಲಿ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲು ಮಾಡಿದೆ.
ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ ಡಿ.12 ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ.
ಇತ್ತೀಚಿಗೆ ಬ್ರಹ್ಮಾವರದಲ್ಲಿ ಕಾಂಗ್ರೆಸ್ ನೇತ್ರತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.
ಕಾಂಗ್ರೆಸ್ ಮುಖಂಡ ಕರಾವಳಿ ಮಲೆನಾಡು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ ತೀವ್ರವಾಗಿ ಖಂಡಿಸಿ ಮಾತಾನಾಡಿ ತನಿಖೆ ನಡೆಸಲು ಆಗ್ರಹಿಸಿದ್ದರು.
ಈ ಪ್ರಕರಣದ ಕುರಿತಾಗಿ ನ್ಯಾಯವಾದಿ ಆರ್. ಜಗನಾಥ್ ಇವರು ವಾದ ಮಂಡಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.