logo
WhatsApp Image 2026-04-02 at 14.46.04.jpeg
hindalco everlast.jpeg

ಬ್ರಹ್ಮಾವರ: ಕೋಟ್ಪಾ ಕಾಯ್ದೆಯಡಿ 44 ಪ್ರಕರಣ ದಾಖಲು

ಟ್ರೆಂಡಿಂಗ್
share whatsappshare facebookshare telegram
16 Jun 2022
post image

ಉಡುಪಿ, : ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬ್ರಹ್ಮಾವರ ತಾಲೂಕಿನ ಬಾರ್ಕೂರು ಹಾಗೂ ಕಾಲೇಜಿನ ಸುತ್ತಮುತ್ತ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 44 ಪ್ರಕರಣ ದಾಖಲಿಸಿ, 5750 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಗದೀಶ್ ರಾವ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಟಿ.ಪಿ.ಇ.ಓ ಗೋಪಾಲ ಶೆಟ್ಟಿ, ಬ್ರಹ್ಮಾವರ ಪೊಲೀಸ್ ಠಾಣೆಯ ಎ.ಎಸ್.ಐ ಬಿ.ಕೆ ಶಾಂತರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.