ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕನೋರ್ವ ಸ್ಥಳದಲ್ಲೆ ಮೃತಪಟ್ಟ ಘಟನೆ ಬ್ರಹ್ಮಾವರ ಮಹೇಶ್ ಆಸ್ಪತ್ರೆಯ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ66ರಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಬ್ರಹ್ಮಾವರ ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ. ಶೆಟ್ಟಿ(14) ಎಂದು ಗುರುತಿಸಲಾಗಿದೆ.
ವಂಶಿ ಇಂದು ಬೆಳಿಗ್ಗೆ ಶಾಲೆಗೆಂದು ತೆರಳುತ್ತಿದ್ದಾಗ ಹೆದ್ದಾರಿ ದಾಟಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಕುಂದಾಪುರದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರೊಂದು ರಭಸವಾಗಿ ಬಂದು ಡಿಕ್ಕಿ ಹೊಡೆದಿದೆ. ತಕ್ಷಣವೇ ಆತನನ್ನು ಹತ್ತಿರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಮಾಹಿತಿಯ ಸುದ್ದಿ ತಿಳಿದು ಆಸ್ಪತ್ರೆಯ ಬಳಿ ಬೃಹತ್ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಮಹೇಶ್ ಆಸ್ಪತ್ರೆ ಜಂಕ್ಷನ್ ಅಪಘಾತ ವಲಯವಾಗಿದ್ದು, ಇಲ್ಲಿ ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.