



ಬೆಂಗಳೂರು: ರಾಜ್ಯದ ಲ್ಲಿ ಶಾಲೆಗಳು ತೆರೆದಿದ್ದು ಇದರ ನಡುವೆ ಸದ್ಯದಲ್ಲಿಯೇ ಮಕ್ಕಳಿಗೆ ನೀಡುವ ಹೋಮ್ ವರ್ಕ್ ಗೆ ಬ್ರೇಕ್ ಬೀಳುವ ನಿರೀಕ್ಷೆ ಇದೆ. , ಇನ್ಮುಂದೆ ಶಿಕ್ಷಕರು ಎರಡನೇ ತರಗತಿವರೆಗೆ ಮಕ್ಕಳಿಗೆ ಹೋಮ್ ವರ್ಕ್ ಕೊಡುವಂತಿಲ್ಲ. ಸರ್ಕಾರಿ ಶಾಲೆಗಳಿಗೆ ಈ ವರ್ಷದಿಂದಲೇ ನಲಿ – ಕಲಿ ರೀತಿ ಮಾತ್ರ ಪುಟ್ಟ ಮಕ್ಕಳಿಗೆ ಶಿಕ್ಷಣ ಇರಲಿದೆ. ಸರ್ಕಾರಿ ಶಾಲೆ ರೀತಿಯಲ್ಲಿ ಖಾಸಗಿ ಶಾಲೆಗೂ ಈ ಆದೇಶ ಹೊರಡಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಹೋಮ್ ವರ್ಕ್ ವಿಚಾರವಾಗಿ ಮದ್ರಾಸ್ ಹೈಕೋರ್ಟ್ ಹಾಗೂ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ಹಿನ್ನೆಲೆ ರಾಜ್ಯದಲ್ಲಿ ಮಕ್ಕಳಿಗೆ ಹೋಮ್ ವರ್ಕ್ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ಕನಿಷ್ಠ 2ನೇ ತರಗತಿವರೆಗೆ ಹೋಂ ವರ್ಕ್ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ಒಲವು ತೋರಿದೆ. . 1-2ನೇ ತರಗತಿ ಮಕ್ಕಳಿಗೆ ಆಟ, ಡ್ರಾಮಾ, ಪದ್ಯ ಹೇಳಿಸುತ್ತಾ ಹೀಗೆ ಚಟುವಟಿಕೆ ಮೂಲಕ ಪಾಠ ಮಾಡುವುದು. ಅಕ್ಷರ ಜ್ಞಾನ ಹಾಗೂ ಸಂಖ್ಯಾ ಜ್ಞಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತೆ ಎಂದು ಹೇಳಲಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.