logo
WhatsApp Image 2026-04-02 at 14.46.04.jpeg
hindalco everlast.jpeg

Breaking news :: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಶೇ. 55.54 % ರಷ್ಟು ವಿದ್ಯಾರ್ಥಿಗಳು ಪಾಸ್ ..

ಟ್ರೆಂಡಿಂಗ್
share whatsappshare facebookshare telegram
11 Oct 2021
post image

ಬೆಂಗಳೂರು:: ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶಇಂದು ಪ್ರಕಟವಾಗಿದ್ದು, ಶೇ. 55.54 % ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದ್ದಾರೆ. ರಾಜ್ಯದಲ್ಲಿ 53,155 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಫಲಿತಾಂಶ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಧ್ಯಾಹ್ನ ಎಸ್‌ಎಂಎಸ್ ಮೂಲಕ ರವಾನೆಯಾಗಲಿದೆ. ಮಧ್ಯಾಹ್ನ ಮೂರು ಗಂಟೆಗೆ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಟಾಪ್ 5 ಎಸ್ ಎಸ್ ಎಲ್ ಸಿ ಟಾಪರ್ ಗಳು 625/ 599 ಅಳ್ವಾಸ್ ಇಂಗ್ಲಿಷ್ ಸ್ಕೂಲ್- ಪುತ್ತೂರು ವಿದ್ಯಾರ್ಥಿ - ಗ್ರೀಷ್ಮಾ ನಾಯಕ್ ಮೊದಲ ರ್ಯಾಂಕ್

625/ 592- ಕಲಬುರಗಿ ವಿದ್ಯಾರ್ಥಿ- ಗ್ರಾಮರ್ ಮಲ್ಟಿ ಮೀಡಿಯಾ ಹೈಸ್ಕೂಲ್- ಎರಡನೇ ರ್ಯಾಂಕ್

625/591- ಮೈಸೂರು ವಿದ್ಯಾರ್ಥಿ - ಮೂರನೇ ರ್ಯಾಂಕ್

625/580 - ಇಂದ್ರಜಿತ್ ಸಿಂಗ್ - ಕಲಬುರಗಿ- ನಾಲ್ಕನೇ ರ್ಯಾಂಕ್

625/577- ಕೆಂಪಯ್ಯ- ಕನಕಪುರ - ಐದನೇ ರ್ಯಾಂಕ್

ಹೊಸ ವಿದ್ಯಾರ್ಥಿಗಳು 18 ಸಾವಿರದ 417 ವಿದ್ಯಾರ್ಥಿಗಳಲ್ಲಿ 9182 ಜನ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಪುನರಾವರ್ತಿತ ಶಾಲಾ ಅಭ್ಯರ್ಥಿಗಳು 23 ಸಾವಿರ 334ರಲ್ಲಿ 13 ಸಾವಿರದ 866 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಹೊಸ ಖಾಸಗಿ ಅಭ್ಯರ್ಥಿಗಳು- 295 ವಿದ್ಯಾರ್ಥಿಗಳಲ್ಲಿ 113 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳು- 78 ಸಾವಿರದ 57 ವಿದ್ಯಾರ್ಥಿಗಳಲ್ಲಿ 4 ಸಾವಿರದ 288 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಬಾಲಕರು- 35 ಸಾವಿರದ 182 ವಿದ್ಯಾರ್ಥಿಗಳಲ್ಲಿ 19232 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಾಲಕಿಯರು- 17 ಸಾವಿರದ 973 ವಿದ್ಯಾರ್ಥಿನಿಯರಲ್ಲಿ 10 ಸಾವಿರದ 290 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ನಗರ ಭಾಗದಲ್ಲಿ 22 ಸಾವಿರದ 757 ವಿದ್ಯಾರ್ಥಿಗಳಲ್ಲಿ 10968 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದಲ್ಲಿ 30 ಸಾವಿರದ 398 ವಿದ್ಯಾರ್ಥಿಗಳಲ್ಲಿ 18 ಸಾವಿರದ 554 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು https://sslc.Karnataka.gov.in ನಲ್ಲಿ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.