logo
WhatsApp Image 2026-04-02 at 14.46.04.jpeg
hindalco everlast.jpeg

ಬೆಂಗಳೂರಿನ ಪ್ರತಿಷ್ಠಿತ ದೂರದರ್ಶನ ಕೇಂದ್ರದಲ್ಲಿ ಪ್ರಸಾರ ಸಹಾಯಕ (Broadcast Assistant) ಹಾಗೂ ಆಂಕರ್/ನಿರೂಪಕ ಹುದ್ದೆ:ಆಸಕ್ತರು ಅರ್ಜಿ ಸಲ್ಲಿಸಿ

ಟ್ರೆಂಡಿಂಗ್
share whatsappshare facebookshare telegram
31 Aug 2026
post image

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ದೂರದರ್ಶನ ಕೇಂದ್ರದಲ್ಲಿ ಪ್ರಸಾರ ಸಹಾಯಕ (Broadcast Assistant) ಹಾಗೂ ಆಂಕರ್/ನಿರೂಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಧ್ಯಮ ಹಾಗೂ ಪ್ರಸಾರ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಯುವ ಪ್ರತಿಭೆಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಗರಿಷ್ಠ 50 ವರ್ಷ ವಯೋಮಿತಿ

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ (ಪಿಯುಸಿ), ಡಿಪ್ಲೊಮಾ ಅಥವಾ ಪದವಿ ಪೂರ್ಣಗೊಳಿಸಿರಬೇಕು. 2026ರ ಆಗಸ್ಟ್ 27ರ ವೇಳೆಗೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ 50 ವರ್ಷ. ಸರ್ಕಾರದ ನಿಯಮಗಳನ್ವಯ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆ ಹಾಗೂ ಕರ್ತವ್ಯದ ಆಧಾರದ ಮೇಲೆ ದಿನಕ್ಕೆ ₹1,125ರಿಂದ ₹3,000ರವರೆಗೆ ಸಂಭಾವನೆ ನೀಡಲಾಗುತ್ತದೆ. ಉದ್ಯೋಗ ಸ್ಥಳ ಬೆಂಗಳೂರು ಆಗಿರಲಿದೆ.

ಆಫ್‌ಲೈನ್‌ ಮತ್ತು ಇ-ಮೇಲ್ ಮೂಲಕ ಅರ್ಜಿ

ಅಭ್ಯರ್ಥಿಗಳು ಆಫ್‌ಲೈನ್ ಹಾಗೂ ಇ-ಮೇಲ್ ಎರಡೂ ವಿಧಾನಗಳಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿಯೊಂದಿಗೆ ಇತ್ತೀಚಿನ ಪಾಸ್‌ಪೋರ್ಟ್‌ ಗಾತ್ರದ ಭಾವಚಿತ್ರ, ವಯಸ್ಸಿನ ಪ್ರಮಾಣಪತ್ರ, ವಿದ್ಯಾರ್ಹತೆಯ ಅಂಕಪಟ್ಟಿಗಳು, ರೆಸ್ಯೂಮ್ ಹಾಗೂ ಅಗತ್ಯವಿದ್ದಲ್ಲಿ ಅನುಭವದ ಪ್ರಮಾಣಪತ್ರಗಳನ್ನು ಸಲ್ಲಿಸಬೇಕು.

ಮೊದಲಿಗೆ ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಯನ್ನು chandananewsvacancy@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು. ಬಳಿಕ ಅರ್ಜಿ ನಮೂನೆ ಹಾಗೂ ಸ್ವಯಂ ದೃಢೀಕರಿಸಿದ ದಾಖಲೆಗಳ ಪ್ರತಿಗಳನ್ನು ‘RNU ಮುಖ್ಯಸ್ಥರು, ದೂರದರ್ಶನ ಕೇಂದ್ರ, ಬೆಂಗಳೂರು, ಕರ್ನಾಟಕ – 560006’ ಎಂಬ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರದರ್ಶನ ವೆಬ್ ಸೈಟ್ ನೋಡಬಹುದು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.