



ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಹಾಡ ಹಗಲೇ ಕಾರ್ಪೊರೇಟರ್ ಒಬ್ಬರ ಪುತ್ರಿ ಯನ್ನು ಬರ್ಬರವಾಗಿ ಕೊಲೆ ಮಾಡಿಲಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಮಾಸ್ಕ್ ಹಾಕಿದ ವ್ಯಕ್ತಿ ನೇಹಾ ಹಿರೇಮಠ ಎನ್ನುವ ಯುವತಿಯನ್ನು ಮನಬಂದಂತೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯ್ದಿದ್ದಾನೆ. ಕೊಲೆಯಾದಾಕೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯ (ಕಾಂಗ್ರೆಸ್) ನಿರಂಜನ್ ಹಿರೇಮಠ ಪುತ್ರಿ.
ನೇಹಾ(24) ಹಿರೇಮಠ ಎಂಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀವ್ರವಾದ ರಕ್ತಸ್ರಾವದಿಂದ ಸಾವಿಗೀಡಾಗಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೆಟಿ ನೀಡಿದ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ. ವಿದ್ಯಾನಗರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನ ಜರುಗಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.