



ಮುಂದಿನ 25 ವರ್ಷಗಳ ಹಿತದೃಷ್ಟಿಯನ್ನಿಟ್ಟುಕೊಂಡು ಈ ಬಾರಿಯ ಬಜೆಟ್ ಮಂಡಿಸಲಾಗಿದೆ,ದೇಶದ ಅಭಿವೃದ್ಧಿಗೆ ಪೂರಕವಾಗಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ನೈಸರ್ಗಿಕ ಕೃಷಿ,ಶೂನ್ಯ ಬಂಡವಾಳ ಕೃಷಿಗೆ ಆದ್ಯತೆ,ಪ್ರಧಾನ ಮಂತ್ರಿ ಆವಾಸ್ ಯೋಜನೆ ಮುಖಾಂತರ 18ಲಕ್ಷ ಮನೆ ನಿರ್ಮಾಣ,ಹರ್ ಘರ್, ನಲ್ ಜಲ್ ಯೋಜನೆ ಮುಖಾಂತರ 12 ಕೋಟಿ ಮನೆಗಳಿಗೆ ನಲ್ಲಿ ನೀರು ವ್ಯವಸ್ಥೆ,ಒನ್ ನೇಶನ್, ಒನ್ ರಿಜಿಸ್ಟ್ರೇಷನ್ ವ್ಯವಸ್ಥೆ,ಅಂಚೆ ಕಚೇರಿಗಳಿಗೆ ಬ್ಯಾಂಕ್ ಸ್ವರೂಪ,ಡಿಜಿಟಲೀಕರಣ ,ಎಲೆಕ್ಟ್ರಿಕಲ್ ವಾಹನಗಳ ಅಭಿವೃದ್ಧಿಗೆ ಹೀಗೆ ಎಲ್ಲಾ ವಲಯಗಳಿಗೆ ಈ ಬಾರಿ ಯ ಬಜೆಟ್ ಲ್ಲಿ ಆದ್ಯತೆ ನೀಡಲಾಗಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ರವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಗಳೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.