logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಸೌಜನ್ಯಾ ಪೋಷಕರಿಗೆ ಎಸ್‌ಐಟಿ ಮುಖ್ಯಸ್ಥರಿಂದ ವಿಚಾರಣೆಗೆ ಬುಲಾವ್

ಟ್ರೆಂಡಿಂಗ್
share whatsappshare facebookshare telegram
2 Nov 2026
post image

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಎಸ್‌ಐಟಿಯ ನೂತನ ಮುಖ್ಯಸ್ಥರು ಸೌಜನ್ಯ ಅವರ ತಾಯಿ ಹಾಗೂ ಮಾವನಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಸೌಜನ್ಯ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಠೋಡ್ ನೇಮಕಗೊಂಡಿದ್ದು, ನವೆಂಬರ್ 2ರಿಂದ ಅವರು ಅಧಿಕೃತವಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಚೇತನ್ ಸಿಂಗ್ ರಾಠೋಡ್ ಅವರು ಇಂದು ಬೆಳಿಗ್ಗೆ ಮಂಗಳೂರಿನ ಎಸ್‌ಐಟಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಇದರ ಬೆನ್ನಲ್ಲೇ ಸೌಜನ್ಯ ಅವರ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಗೆ ಇಂದು ಮಧ್ಯಾಹ್ನ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ನೂತನ ಮುಖ್ಯಸ್ಥರ ನೇಮಕದ ಬೆನ್ನಲ್ಲೇ ಮರುತನಿಖೆ ಚುರುಕುಗೊಂಡಿರುವುದು ಪ್ರಕರಣದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗಿದೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.