logo
WhatsApp Image 2026-04-02 at 14.46.04.jpeg
hindalco everlast.jpeg

ತೀರ್ಥಹಳ್ಳಿ ಬಳಿಯ ದಟ್ಟ ಕಾಡಿನ ನಡುವೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು, ಅಸ್ಥಿ ಪಂಜರ ಪತ್ತೆ ಪ್ರಕರಣ .: ಕೌಟುಂಬಿಕ ಕಲಹವೇ ಕೊಲೆಗೆ ಮುಳುವಾಯಿತೆ?

ಟ್ರೆಂಡಿಂಗ್
share whatsappshare facebookshare telegram
1 Oct 2021
post image

ತೀರ್ಥಹಳ್ಳಿ: ದಟ್ಟ ಕಾಡಿನ ನಡುವೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು, ಅಸ್ಥಿ ಪಂಜರ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು , ಮೃತ ವ್ಯಕ್ತಿಯ ಮಕ್ಕಳು, ಪತ್ನಿ ಸೇರಿ ಐವರನ್ನು ಬಂಧಿಸಲಾಗಿದೆ. ಮನೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯವರೇ ಸೇರಿ ವ್ಯಕ್ತಿಯ ಕೊಲೆ ಮಾಡಿದ್ದಾರೆ.

ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45 ವ) ಎಂದು ಗುರುತಿಸಲಾಗಿದೆ.

ವಿನೋದ್ ಅವರನ್ನು ಕೊಲೆಗೈದು, ಮೃತದೇಹವನ್ನು ಕಾರಿನಲ್ಲಿ ಕಾಡಿಗೆ ತಂದು, ಮೃತದೇಹ ಸಹಿತ ಕಾರಿಗೆ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್‌ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮನ ಕೈವಾಡ ಇರುವುದು ತಿಳಿದು ಬಂದಿದೆ.

ಸೆ. 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆ. 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು. ಸೆ.26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ರಾಡ್‌ನಿಂದ ಹೊಡೆದು ವಿನೋದ್ ಅವರ ಕೊಲೆ ಮಾಡಲಾಗಿದೆ. ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಅವರ ಮೃತದೇಹವನ್ನು ಸಾಗಿಸಲಾಗಿದೆ. ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು, ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿದ್ದರು. ಮನೆಯಲ್ಲೇ ಮೊಬೈಲ್ ಗಳನ್ನು ಇಟ್ಟು ಹೋಗಿದ್ದರು.

ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ. ಚಾಲಕನ ಸೀಟಿನಲ್ಲಿ ಮೃತದೇವನ್ನು ಇರಿಸಿದ್ದಾರೆ. ಮೊದಲೇ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು. ತನಿಖೆ ವೇಳೆ ಮನೆಯವರ ಮೇಲೆಯೇ ಅನುಮಾನಗೊಂಡ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದರು. ಈ ವೇಳೆ ವಿನೋದ್ ಕೊಲೆಯ ಸಂಪೂರ್ಣ ಮಾಹಿತಿ ಬಹಿರಂಗಗೊಂಡಿದೆ. ಪೊಲೀಸರು ಐವರನ್ನು ಬಂಧಿಸಿದ್ದಾರೆ.ಪೊಲೀಸರು ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.