



ಹೆಬ್ರಿ: ಹೆಬ್ರಿ ಸೀತಾನದಿ ಬಳಿ ಬಸ್-ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿದ್ದಾರೆ.
ಈ ಘಟನೆಯು ಸೀತಾನದಿ ಜಕ್ಕನಮಕ್ಕಿ ಬಳಿ ಜೂ. 11ರ ಆದಿತ್ಯವಾರ ಸುಮಾರು 1.30 ಕ್ಕೆ ನಡೆದಿದೆ. ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ. ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ. ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.