logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು: ನಾಗೂರು ಬಳಿ ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೆ ಸಾವು

ಟ್ರೆಂಡಿಂಗ್
share whatsappshare facebookshare telegram
17 Jun 2022
post image

ಬೈಂದೂರು: ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕಾರು ಢಿಕ್ಕಿಯಾದ ಪರಿಣಾಮ ಪಾದಾಚಾರಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ಸಂಜೆ ಇಲ್ಲಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಾಗೂರು ನಿವಾಸಿ 45 ವರ್ಷದ ಸದಾಶಿವ ಶ್ಯಾನುಭೋಗ್ ಮೃತ ದುರ್ದೈವಿ. ವ್ಯಾಕ್ಸ್ ವೋಗನ್ ಪೋಲೋ ಕಾರಿನಲ್ಲಿ ಕುಟುಂಬವೊಂದು ಭಟ್ಕಳದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ನಾಗೂರಿನಲ್ಲಿ ಇದೇ ಸಂದರ್ಭ ಸದಾಶಿವ ಶ್ಯಾನುಭೋಗ ಅವರು ಹೆದ್ದಾರಿ ದಾಟಲು ಯತ್ನಿಸಿದ್ದು, ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸದಾಶಿವ ಸವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.