



ಬೈಂದೂರು; ಶ್ರೀ ಮಾತಾ ಹಿರಿಯ ಪ್ರಾಥಮಿಕ ಶಾಲೆ ಮುದೂರಿನ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಯಶೋಧ ಶೆಟ್ಟಿಯವರಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಬೆಳ್ತಂಗಡಿಯ ಧರ್ಮಗುರುಗಳಾದ ವಂದನೀಯ ಫಾದರ್ ಜೋಸೆಫ್ ಮಟ್ಟಂ ರವರು ವಹಿಸಿದ್ದರು.ಸಮಾರಂಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಯಶೋಧ ಶೆಟ್ಟಿ, ಶಾಲಾ ಆಡಳಿತ ಮಂಡಳಿಯ ಗೌರವ ಸದಸ್ಯರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಬೈಂದೂರು, ಶಾಲಾ ಸಂಚಾಲಕರಾದ ವಂದನೀಯ ಫಾದರ್ ಅಗಸ್ಟಿನ್,ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವನಜಾಕ್ಷಿ ಶೆಟ್ಟಿ,ಸುದೇಶ್ ಶೆಟ್ಟಿ ಕುಂದಾಪುರ.ಶಿಕ್ಷಣ ಇಲಾಖೆಯಿಂದ ಬಿ.ಆರ್.ಪಿ.ಶ್ರೀ ಮಂಜುನಾಥ, ಸಿ.ಆರ್.ಪಿ. ಶ್ರೀ ವಿಶ್ವನಾಥ ಮೇಸ್ತ,ಶಾಲಾ ನಿವೃತ್ತ ಶಿಕ್ಷಕ ಶ್ರೀ ಶಂಕರ್ ನಾಯ್ಕ್,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಶೇಖರ ಭೋವಿ,ಮುಖ್ಯ ಶಿಕ್ಷಕರಾದ ಮನೋಹರ ಛಲವಾದಿ ಉಪಸ್ಥಿತರಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿರುವ ಫಾದರ್ ಜೋಸೆಫ್ ಮಟ್ಟಂ ರವರು ಮಾತನಾಡಿ ನಿವೃತ್ತ ಮುಖ್ಯ ಶಿಕ್ಷಕಿಯವರ ಸೇವಾ ಕಾರ್ಯದ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು. ನಿವೃತ್ತ ಮುಖ್ಯ ಶಿಕ್ಷಕಿ ಯಶೋಧ ಶೆಟ್ಟಿಯವರು ಮಾತನಾಡಿ ಸೇವಾ ಅವಧಿಯಲ್ಲಿ ಸಹಕಾರ ನೀಡಿದ ಸರ್ವರನ್ನು ಸ್ಮರಿಸಿ ಅಭಿನಂದಿಸಿದರು.ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿ ಪೋಷಕರು,ವಿದ್ಯಾರ್ಥಿಗಳು,ಹಳೆ ವಿದ್ಯಾರ್ಥಿಗಳು,ಆಡಳಿತ ಮಂಡಳಿಯ ಸರ್ವ ಸದಸ್ಯರು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು. ಶಾಲಾ ಸಂಚಾಲಕಾರದ ವಂದನೀಯ ಫಾದರ್ ಅಗಸ್ಟಿನ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ,ಮುಖ್ಯ ಶಿಕ್ಷಕರಾದ ಮನೋಹರ ಛಲವಾದಿಯವರು ಸ್ವಾಗತಿಸಿ,ಉಪನ್ಯಾಸಕ ಉದಯ್ ನಾಯ್ಕ್ ಬೈಂದೂರು ಕಾರ್ಯಕ್ರಮ ನಿರೂಪಿಸಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಶೇಖರ್ ಭೋವಿ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.