logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು:ಮಗುವಿನೊಂದಿಗೆ ಮಹಿಳೆ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
18 Feb 2022
post image

ಬೈಂದೂರು: ವಿವಾಹಿತ ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ತೊಪ್ಪಲು ಎಂಬಲ್ಲಿ ನಡೆದಿದೆ.

ಉಪ್ಪುಂದ ಗ್ರಾಮದ ತೊಪ್ಪಲು ನಿವಾಸಿ 45 ವರ್ಷದ ಸುನಂದ ಹಾಗೂ ಅವರ 8 ವರ್ಷದ ಮಗಳು ಅಶ್ಮಿತಾ ಕಾಣೆಯಾಗಿದ್ದಾರೆ. ಇವರು ಫೆ.14ರಂದು ಮಧ್ಯಾಹ್ನ 12 ಗಂಟೆಗೆ ಮನೆಯಿಂದ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಾಸ್ಸು ಬಾರದೇ ಕಾಣೆಯಾಗಿದ್ದಾರೆ.

ಸಂಬಂಧಿಕರು ಹಾಗೂ ಮನೆಯ ಸುತ್ತಮುತ್ತ ವಿಚಾರಿಸಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.