



ಬೈಂದೂರು: ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಎರಡನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ.
ಚಪ್ಪರಿಕೆ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ, ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7 ) ನೀರುಪಾಲಾದ ಬಾಲಕಿ.
ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದಾಗ ಬಿಜಮಕ್ಕಿ ಎಂಬಲ್ಲಿ ಕಾಲು ಸಂಕ ದಾಟುವಾಗ ಬಾಲಕಿ ಆಯಾತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಈ ಹಳ್ಳ ಬೋಳಂಬಳ್ಳಿ ನದಿಗೆ ಸೇರುತ್ತಿದ್ದು, ನೀರಿನ ಸೆಳೆತಕ್ಕೆ ಮಗು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಪತ್ತೆಯಾದ ಬಾಲಕಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.
ಸ್ಥಳಕ್ಕೆ ತಹಶೀಲ್ದಾರ್ ಕಿರಣ್ ಗೌರಯ್ಯ, ಎಸ್.ಐ ಪವನ್ ನಾಯ್ಕ್ ಮೊದಲಾದವರು ಭೇಟಿ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.