logo
WhatsApp Image 2026-04-02 at 14.46.04.jpeg
hindalco everlast.jpeg

ಬೈಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
31 Oct 2022
post image

ಬೈಂದೂರು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ‌ ಹಳ್ಳಿಹೊಳೆ ಎಂಬಲ್ಲಿ ಅ.30ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹಳ್ಳಿಹೊಳೆ ನಿವಾಸಿ 36ವರ್ಷದ ಶ್ರೀಧರ ಚಾತ್ರ ಎಂದು ಗುರುತಿಸಲಾಗಿದೆ. ಇವರು 2009ರಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಕುಂದಾಪುರ, ಮಣಿಪಾಲ ಕೆ ಎಂ ಸಿ  ಮತ್ತು  ಉಡುಪಿಯ ಬಾಳೀಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಸರಿಯಾಗಿ ಗುಣಮುಖವಾಗಿರಲಿಲ್ಲ. ಇದೇ ಚಿಂತೆಯಲ್ಲಿ ಜೀವನದಲ್ಲಿ ಮನನೊಂದು ನಿನ್ನೆ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.