



ಸುಳ್ಯ: ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಖಂಡಿಸಿದ್ದು ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂತಹ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರದಲ್ಲಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ್ ಆತ್ಮಹತ್ಯೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಸಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪುತ್ತೂರು ಕಡಬ ಸುಳ್ಯ ದಲ್ಲಿತಾಲೂಕುಗಳಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು ಅಹಿತಕರ ಘಟನೆಗಳು ಮರುಕಳಿಸದಂತೆ ಪೋಲಿಸ್ ಬಂದೊಬಸ್ತ್ ಮಾಡಲಾಗಿದೆ .ಹಾಗೂ ಸ್ವಯಂ ಪ್ರೇರಿತ ಬಂದ್ ಗೆ ಸಂಘಟನೆಗಳು ಕರೆ ನೀಡಿವೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.