



ಬೆಂಗಳೂರು: ಬೆಳಗಾವಿಯಲ್ಲಿ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಹೌದು.. ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಕರ್ನಾಟಕದ ಸಾರಿಗೆ ಇಲಾಖೆ KSRTC ಬಸ್ ನಲ್ಲಿ ಕಂಡಕ್ಟರ್ ಮತ್ತು ಪ್ರಯಾಣಿಕನೊಂದಿಗೆ ನಡೆದಿದ್ದ ಗಲಾಟೆ ಪ್ರಕರಣ ತಾರಕಕ್ಕೇರಿತ್ತು. ಅಂದು ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಅಲ್ಲದೆ ಕರ್ನಾಟಕದ ಬಸ್ ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು.
ಇದೀಗ ಇಂತಹ ಪುಂಡಾಟಿಕೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಿಗರ ವಿರುದ್ಧ ದೌರ್ಜನ್ಯ ವೆಸಗುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಸರ್ಕಾರದ ಮೇಲೆ ಒತ್ತಡ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.