logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಓಮಿಕ್ರಾನ್ ಭೀತಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್ಲ ಸೇವೆಗಳು ರದ್ದು: ವಾರಾಂತ್ಯ ದರ್ಶನಕ್ಕೂ ಅವಕಾಶ ಇಲ್ಲ

ಟ್ರೆಂಡಿಂಗ್
share whatsappshare facebookshare telegram
6 Jan 2022
post image

ಸುಬ್ರಹ್ಮಣ್ಯ :ದೇಶದಾದ್ಯಂತ ಹರಡುತ್ತಿರುವ ಓಮಿಕ್ರಾನ್  ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಮತ್ತು ದ.ಕ. ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.6ರಿಂದ ಮುಂದಿನ ಆದೇಶದ

ವರೆಗೆ ಯಾವುದೇ ಸೇವೆಗಳು ನಡೆಯವುದಿಲ್ಲ.

ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶವಿರುತ್ತದೆ ಎಂದು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಶನಿವಾರ, ಭಾನುವಾರ ದರುಶನ ಇಲ್ಲ:

ದೇವರ ದರ್ಶನಕ್ಕೆ ಒಂದು ಬಾರಿಗೆ 50  ಮಂದಿ ಭಕ್ತರಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿoದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ಶ್ರೀ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನವನ್ನು ಪಡೆಯಬಹುದಾಗಿದೆ. ಶ್ರೀ ದೇವಳದಲ್ಲಿ ಸಂಬoಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜಾದಿ ವಿನಿಯೋಗಗಳು ಎಂದಿನoತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ಸಹಕರಿಸಿ: ದೇವಳದಲ್ಲಿ ಪ್ರಧಾನ ದೇವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತಿತರ ಪರಿವಾರ ದೇವರುಗಳ ಗುಡಿಗಳಲ್ಲಿ ಸಂಬoಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜಾದಿ ವಿನಿಯೋಗಗಳು ಎಂದಿನoತೆ ನಡೆಯುವುದು. ಶ್ರೀ ದೇವಳದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸಿಂಗ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್-19 ನಿಯಮಾವಳಿಗಳನ್ನು ಅಸನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಲಾಗಿದೆ. ಶ್ರೀ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಖಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.