ಬೆಂಗಳೂರು: ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿದೆ. ಆರು ವಾರಗಳ ನಂತರ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ರದ್ದಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರು ಬುಧವಾರ ಈ ಆದೇಶ ಹೊರಡಿಸಿದ್ದಾರೆ.
ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ ಹೊರತು, ಅರ್ಜಿದಾರರು ಬೈಕ್ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಿಲ್ಲ ಮತ್ತು ಈ ಸಂಬಂಧ ಕರ್ನಾಟಕ ಸಾರಿಗೆ ಇಲಾಖೆಗೆ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ನಿರ್ದೇಶನ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.