



ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದ್ರೇ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.ರಾಜ್ಯದಲ್ಲಿ 0-14 ವರ್ಷ 22,318 ಮಕ್ಕಳಿಗೆ ಕೊರೋನಾ, 6,307 ಜನರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 401 ಮಕ್ಕಳು ಮಾತ್ರವೇ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರೋ ಕಾರಣದಿಂದಾಗಿ ಜನವರಿ 31ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಅನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.