



ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಅವರ ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದ ಸಿದ್ದರಾಮಯ್ಯ, ಈ ವರ್ಷ ವಿಳಂಬವಾಯಿತು. ಮುಂದಿನ ವರ್ಷದಿಂದ ಎನ್ಇಪಿಯನ್ನು ಪೂರ್ಣವಾಗಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳ ವಿರೋಧವಿದೆ. ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳಲ್ಲೇ ಇದನ್ನು ಅನುಷ್ಠಾನಕ್ಕೆ ತಂದಿಲ್ಲ. ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೊಳಿಸಲಾಯಿತು ಎಂದು ಸಿಎಂ ಹೇಳಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.