



ನವದೆಹಲಿ: ಕೋವಿಡ್ ಎರಡನೇ ಅಲೆಯಿಂದ ದೇಶವು ಹೊರಬಂದಿದೆಯಾದರೂ, ಮುಂದಿನ ಅಲೆ ಯಾವಾಗ ಅಪ್ಪಳಿಸಲಿದೆ ಎಂಬುದು ಯಾರಿಗೂ ತಿಳಿದಿಲ್ಲ. ಹಾಗಾಗಿ, ರಾಜ್ಯ ಸರ್ಕಾರಗಳಿಗೆ ಶಾಲೆಗಳನ್ನು ಪುನರಾರಂಭಿಸಿ ಎಂದು ಹೇಳಲು ಸಾಧ್ಯವಿಲ್ಲ' ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ಮಾಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲಾಗಿದೆ' ಎನ್ನುವುದನ್ನು ನ್ಯಾಯಾಲಯದ ಗಮನಕ್ಕೆ ತಂದ, ಅರ್ಜಿದಾರರ ಪರ ವಕೀಲ ಅಮರ್ ಪ್ರೇಮ್ ಪ್ರಕಾಶ್ ಅವರು, 'ಶಾಲೆಗಳನ್ನು ತೆರೆಯದಿರುವುದರಿಂದ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯಲ್ಲಿ ಏರಿಳಿತಗಳಾಗಿವೆ. ಲಸಿಕೆ ಹಾಕಿಸಿಕೊಂಡವರಿಗೆ ಸಾರ್ವಜನಿಕ ಸ್ಥಳಗಳನ್ನು ತೆರೆಯಲಾಗಿದೆ. ಆದರೆ, ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಏಕೆ ಆದ್ಯತೆ ನೀಡಬಾರದು' ಎಂದು ಪ್ರಶ್ನಿಸಿದರು.
ಕೋವಿಡ್ ಲಸಿಕೆ ಹಾಕಲಾಗುತ್ತಿದೆ. ನಿಜ. ಆದರೆ, ಮಕ್ಕಳಿಗೆ ಇನ್ನೂ ಲಸಿಕೆ ಬಂದಿಲ್ಲ. ಅನೇಕ ಶಿಕ್ಷಕರು ಕೂಡಾ ಲಸಿಕೆ ಹಾಕಿಸಿಕೊಳ್ಳದೇ ಇರಬಹುದು. ಇಂಥ ಸಂದರ್ಭದಲ್ಲಿ ಎಲ್ಲಾ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಿ ಎಂದು ನಾವು ಹೇಳಲು ಸಾಧ್ಯವಿಲ್ಲ. ಆಡಳಿತಾತ್ಮಕವಾದ ಸಮಸ್ಯೆಗಳೂ ಇವೆ' ಎಂದು ಪೀಠ ತಿಳಿಸಿತು
ಅರ್ಜಿದಾರ ವಿದ್ಯಾರ್ಥಿಯು ತನ್ನ ಅಧ್ಯಯನದ ಕಡೆಗೆ ಗಮನ ಕೇಂದ್ರೀಕರಿಸಬೇಕು. ಮಕ್ಕಳು ಇಂತಹ ಮನವಿಗಳನ್ನು ಸಲ್ಲಿಸುವುದನ್ನು ತಡೆಯಬೇಕು. ಏಕೆಂದರೆ ಎಲ್ಲಾ ರಾಜ್ಯಗಳಲ್ಲೂ ಒಂದೇ ರೀತಿಯ ಪರಿಸ್ಥಿತಿ ಇರುವುದಿಲ್ಲ. ಎಲ್ಲಾ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಿ ಎಂದು ನಾವು ನಿರ್ದೇಶನ ನೀಡಲು ಸಾಧ್ಯವಿಲ್ಲ' ಎಂದು ಹೇಳಿ, ಅರ್ಜಿಯನ್ನು ಹಿಂಪಡೆಯುವಂತೆ ಅರ್ಜಿದಾರರಿಗೆ ಸೂಚನೆ ನೀಡಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.