



ವಿಮೆ ಇಲ್ಲದ ಕಾರಣ ಮುಂದಿಟ್ಟುಕೊಂಡು ಅಪಘಾತ ಪ್ರಕರಣಗಳಲ್ಲಿ ಸಿಲುಕಿದ ವಾಹನಗಳನ್ನು ಅವುಗಳ ಮಾಲೀಕರಿಗೆ ಬಿಡುಗಡೆ ಮಾಡಲು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಹೈಕೋರ್ಟ್ ಅಪಘಾತ ನಡೆದ ಸಂದರ್ಭದಲ್ಲಿ ಅರ್ಜಿದಾರರ ವಾಹನಕ್ಕೆ ವಿಮೆ ಇರಲಿಲ್ಲ ಎನ್ನುವುದು ಸತ್ಯ. ಆದರೆ, ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವ ವ್ಯಕ್ತಿಗಳ ಹಿತದೃಷ್ಟಿಯಿಂದ ಅವರು ಪರಿಹಾರ ಕೋರಲು ಅವಕಾಶ ಕಲ್ಪಿಸುವುದಕ್ಕಾಗಿ ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 232ಜಿ ಗೆ ತಿದ್ದುಪಡಿ ತರಲಾಗಿದೆ. ಅದರ ಪ್ರಕಾರ, ಅಪಘಾತದಲ್ಲಿ ಭಾಗಿಯಾದ ವಾಹನಗಳನ್ನು ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಬಹುದಾಗಿದೆ ಎಂದು ಆದೇಶಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.