logo
WhatsApp Image 2026-04-02 at 14.46.04.jpeg
hindalco everlast.jpeg

ಕಾರು ಮರಕ್ಕೆ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
3 Aug 2024
post image

ಕೋಲಾರ: ಕೋಲಾರ ಹೊರವಲಯದ ಬಂಗಾರಪೇಟೆ ಮುಖ್ಯರಸ್ತೆ ಸಹಕಾರ ನಗರದಲ್ಲಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಪಾರಾದ ಘಟನೆ ನಡೆದಿದೆ.

ಮೃತರನ್ನು ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಎಂದು ಗುರುತಿಸಲಾಗಿದೆ.

ಬಂಗಾರಪೇಟೆಯ ಸಾಯಿ ಗಗನ್ ಘಟನೆಯಲ್ಲಿ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಮೃತರು ಪ್ರಸಿದ್ಧ ಯೂನಿವರ್ಸಿಟಿವೊಂದರ ವಿದ್ಯಾರ್ಥಿಗಳಾಗಿದ್ದು, ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.