logo
WhatsApp Image 2026-04-02 at 14.46.04.jpeg
hindalco everlast.jpeg

ಮಿಯಾರಿನಲ್ಲಿ ವಾಹನ ಡಿಕ್ಕಿಯಾಗಿ ಕಾರು ಪಲ್ಟಿ: ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು

ಟ್ರೆಂಡಿಂಗ್
share whatsappshare facebookshare telegram
10 Aug 2022
post image

ಕಾರ್ಕಳ:

ಹಿಂದಿನಿಂದ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಾರೊಂದು ಪಟ್ಟಿಯಾದ ಘಟನೆ ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ ಹತ್ತಿರದ ಕಾಜರಬೈಲ್ ಎಂಬಲ್ಲಿ ಅ.9 ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಘಾಟಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದು, ಮಿಯಾರಿನ ಕುಂಟಿಬೈಲಿನ ಸಮೀಪ ಕಾಜರಬೈಲ್ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಚಾಲಕ ಒಮ್ಮೇಲೆ ಬ್ರೇಕ್ ಹಾಕಿದ್ದಾನೆ. ಇದರ ಪರಿಣಾಮ ಹಿಂದಿನಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಅವರನ್ನು ಅದೇ ರಸ್ತೆಯಲ್ಲಿ ಬರುತ್ತಿದ್ದ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.